ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ನಾಯಕ ಲಾಲು ಪ್ರಸಾದ್ ಯಾದವ್, ಪತ್ನಿ ರಾಬ್ರಿ ದೇವಿ ಹಾಗೂ ಪುತ್ರಿ ಮಿಸಾ ಭಾರತಿಗೆ ದೆಹಲಿ ನ್ಯಾಯಾಲಯ ಬುಧವಾರ ಜಾಮೀನು ಮಂಜೂರು ಮಾಡಿದೆ.
Advertisement
ರೋಸ್ ಅವೆನ್ಯೂ ನ್ಯಾಯಾಲಯದ ವಿಶೇಷ ನ್ಯಾಯಾಧೀಶರಾದ ಗೀತಾಂಜಲಿ ಗೋಯೆಲ್ ಅವರು, ಆರೋಪಿಗಳಿಂದ ತಲಾ 50 ಸಾವಿರ ರೂ.ಗಳ ಬಾಂಡ್ ಹಾಗೂ ಶ್ಯೂರಿಟಿ ಪಡೆದು ಜಾಮೀನು ನೀಡಿದ್ದಾರೆ.
ಮುಂದಿನ ವಿಚಾರಣೆಯನ್ನು 29ಕ್ಕೆ ಮುಂದೂಡಿದ್ದಾರೆ.