Advertisement

ತೇಜಸ್ವಿ ಯಾದವ್‌ ಬೆಂಬಲಿಗನ ವಿಚಾರಣೆ ನಡೆಸಿದ ಸಿಬಿಐ ಅಧಿಕಾರಿಗಳು

08:30 PM Oct 08, 2022 | Team Udayavani |

ನವದೆಹಲಿ: ಬಿಹಾರದ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್‌ ಅವರ ಖಾಸಗಿ ಕಾರ್ಯದರ್ಶಿ ಸಂಜಯ್‌ ಯಾದವ್‌ ಅವರನ್ನು ಸಿಬಿಐ ಅಧಿಕಾರಿಗಳು ಶನಿವಾರ ನವದೆಹಲಿಯಲ್ಲಿ ವಿಚಾರಣೆ ಮಾಡಿದ್ದಾರೆ.

Advertisement

ತೇಜಸ್ವಿ ಅವರ ತಂದೆ ಲಾಲೂ ಪ್ರಸಾದ್‌ ಯಾದವ್‌ ಅವರು ರೈಲ್ವೆ ಸಚಿವರಾಗಿದ್ದಾಗ ನಡೆದ ರೈಲ್ವೆ ಇಲಾಖೆಯ ನೇಮಕಾತಿ ಹಗರಣ ಸಂಬಂಧಿಸಿದಂತೆ ಈ ವಿಚಾರಣೆ ನಡೆಸಲಾಗಿದೆ.

ಲಾಲೂ, ಪತ್ನಿ ರಾಬ್ರಿ ದೇವಿ ಹಾಗೂ ಮಗಳು ಮೀಸಾ ಭಾರತಿ ವಿರುದ್ಧ ಸಿಬಿಐ ಶುಕ್ರವಾರ ಚಾರ್ಜ್‌ಶೀಟ್‌ ಸಲ್ಲಿಸಿದ್ದು, ಅದರ ಬೆನ್ನಲ್ಲೇ ಈ ವಿಚಾರಣೆಯನ್ನು ನಡೆಸಿದೆ.

ಸಂಜಯ್‌ ಅವರನ್ನು ಈ ಹಿಂದೆಯೇ ಒಮ್ಮೆ ವಿಚಾರಣೆಗೆ ಹಾಜರಾಗಲು ಸಮನ್ಸ್‌ ನೀಡಲಾಗಿತ್ತು. ಆದರೆ ಆಗ ಅವರು ಅದನ್ನು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ ಮೆಟ್ಟಿಲೇರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next