Advertisement

ಜಮ್ಮು-ಕಾಶ್ಮೀರದಲ್ಲಿ ಶೀಘ್ರದಲ್ಲೇ ಫಿಲಂ ಸಿಟಿ ನಿರ್ಮಾಣ

08:53 PM Sep 21, 2022 | Team Udayavani |

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಮೊದಲ ಮಲ್ಟಿಪ್ಲೆಕ್ಸ್‌ ಚಿತ್ರಮಂದಿರ ಉದ್ಘಾಟನೆ ಬೆನ್ನಲ್ಲೇ, ಫಿಲಂ ಸಿಟಿ ನಿರ್ಮಿಸಲು ಸ್ಥಳೀಯ ಸರ್ಕಾರ ಮುಂದಾಗಿದೆ.

Advertisement

ಇದಕ್ಕಾಗಿ ಈಗಾಗಲೇ ಸ್ಥಳ ಗುರುತಿಸಲಾಗಿದೆ. ಲೆಫ್ಟಿನೆಂಟ್‌ ಗವರ್ನರ್‌ ಮನೋಜ್‌ ಸಿನ್ಹಾ ನೇತೃತ್ವದ ಆಡಳಿತ ಕೇಂದ್ರಾಡಳಿತ ಪ್ರದೇಶದಲ್ಲಿ ಸಿನಿಮಾ ನೀತಿ-2021 ಜಾರಿಗೆ ತಂದ ನಂತರ ಕಾಶ್ಮೀರದಲ್ಲಿ ಹೆಚ್ಚು ಸಿನಿಮಾಗಳ ಚಿತ್ರೀಕರಣ ನಡೆಯುತ್ತಿದೆ.

“ಮುಂದಿನ ದಿನಗಳಲ್ಲಿ ಹೆಚ್ಚು ಹೆಚ್ಚು ಸಿನಿಮಾಗಳು ಚಿತ್ರೀಕರಣಗೊಳ್ಳಲಿದೆ. ಶೀಘ್ರದಲ್ಲೇ ಫಿಲಂ ಸಿಟಿ ನಿರ್ಮಾಣವಾಗಲಿದೆ.

ನೂತನ ಸಿನಿಮಾ ನೀತಿ ಅಡಿ ಯುವ ಸಿನಿಮಾ ನಿರ್ಮಾಪಕರಿಗೆ ಹೆಚ್ಚು ಉತ್ತೇಜನ ನೀಡಲಾಗುವುದು. ಇದರಿಂದ ಸ್ಥಳೀಯವಾಗಿ ಹೆಚ್ಚು ಉದ್ಯೋಗ ಸೃಷ್ಟಿಯಾಗಲಿದೆ,’ ಎಂದು ಸಿನ್ಹಾ ತಿಳಿಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next