Advertisement

ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಕೃಷಿಗೆ ಕಂಟಕ

11:21 AM Jul 17, 2020 | Suhan S |

ಸೊರಬ: ರಾಜ್ಯ ಸರ್ಕಾರ ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಕಂಟಕವನ್ನುಂಟು ಮಾಡುತ್ತಿದೆ ಎಂದು ಮಾಜಿ ಶಾಸಕ ಎಸ್‌. ಮಧು ಬಂಗಾರಪ್ಪ ಆರೋಪಿಸಿದರು.

Advertisement

ತಾಲೂಕಿನ ಕುಬಟೂರು ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರ ಹಿತಕ್ಕೆ ಧಕ್ಕೆ ತರುವ ಕರಾಳ ಕಾಯ್ದೆಯಾಗಿದ್ದು, ಈಗಾಗಲೇ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸುವ ಮೂಲಕ ರಾಜ್ಯಪಾಲರಿಂದ ಅಂಕಿತ ಪಡೆಯಲಾಗಿದೆ. ಭೂ ಸುಧಾರಣೆ ಕಾಯ್ದೆ ಜಾರಿಯಾದ ದಿನ ರೈತರಿಗೆ ದುರಂತ ದಿನವಾಗಿದ್ದು, ಈ ನಿಟ್ಟಿನಲ್ಲಿ ಬಲವಾಗಿ ವಿರೋಧಿ ಸುತ್ತೇನೆ ಎಂದರು.

ಮೂಡಿ ಮತ್ತು ಮೂಗೂರು ಏತ ನೀರಾವರಿ ಯೋಜನೆಗಳಿಗೆ ಎಸ್‌. ಬಂಗಾರಪ್ಪ ಅವರ ಅವ ಧಿಯಲ್ಲಿಯೇ ರೂಪುರೇಷೆಗಳನ್ನು ತಯಾರಿಸಿ, ಅಂದೇ ಶಂಕುಸ್ಥಾಪನೆ ನೆರವೇರಿಸಲಾಗಿತ್ತು. ತಾವು ಶಾಸಕರಾದ ಅವ ಧಿಯಲ್ಲಿ ಮತ್ತು ಶಾಸಕರಾಗಿರದ ಸಂದರ್ಭದಲ್ಲಿಯೂ ತಂದೆಯವರ ಕನಸಿನ ಕೂಸಾದ ನೀರಾವರಿ ಯೋಜನೆಗಳ ಅನುಷ್ಠಾನಕ್ಕಾಗಿ ಪ್ರಯತ್ನ ಪಟ್ಟಿದ್ದೇನೆ. ಎಚ್‌.ಡಿ. ಕುಮಾರಸ್ವಾಮಿ ಅವರ ನೇತೃತ್ವದ ಸರ್ಕಾರ ಬಜೆಟ್‌ನಲ್ಲಿ ಅನುದಾನ ಮೀಲಿಟಿತ್ತು. ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಹಿಂದಿನ ಸರ್ಕಾರದಲ್ಲಿ ಮೀಸಲಿಟ್ಟ ಅನುದಾನವನ್ನು ಬಜೆಟ್‌ನಲ್ಲಿ ಮಂಡಿಸಿದ್ದಾರೆ. ಇದರಲ್ಲಿ ಕ್ಷೇತ್ರದ ಶಾಸಕರ ಕೊಡುಗೆ ಏನೂ ಇಲ್ಲ ಎಂದು ಸ್ಪಷ್ಟಪಡಿಸಿದರು.

ಕೋವಿಡ್ ಸಂಕಷ್ಟದಿಂದ ಜನತೆ ನಗರ ಪ್ರದೇಶಗಳನ್ನು ತೊರೆದು ಗ್ರಾಮೀಣ ಪ್ರದೇಶಗಳತ್ತ ಮುಖ ಮಾಡುತ್ತಿದ್ದಾರೆ. ಅವರನ್ನು ಗೌರವದಿಂದ ಕಾಣಬೇಕು. ಸರ್ಕಾರ ನಗರ ಪ್ರದೇಶದಲ್ಲಿ ಕೈಗೊಳ್ಳುವ ಕ್ರಮಗಳನ್ನು ಗ್ರಾಮೀಣ ಪ್ರದೇಶಕ್ಕೂ ವಿಸ್ತರಿಸಬೇಕು. ಜಿಲ್ಲೆಯಲ್ಲಿ ಸೋಂಕು ಹೆಚ್ಚಾಗುತ್ತಿರುವ ಮಾಹಿತಿ ಇದ್ದು, ಕೋವಿಡ್‌ ಸೋಂಕು ಪರೀಕ್ಷಾ ಕೇಂದ್ರಗಳನ್ನು ಹೆಚ್ಚು ಪ್ರಾರಂಭಿಸಿ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರ ರಾಜಕಾರಣದ ಭವಿಷ್ಯವನ್ನು ಬದಲಾವಣೆ ಮಾಡಿದವರು ಎಸ್‌. ಬಂಗಾರಪ್ಪನವರು. ಡಿಕೆಶಿ ಅವರು ಸದಾ ಈ ಗೌರವವನ್ನಿಟ್ಟುಕೊಂಡಿದ್ದಾರೆ. ಈ ನಿಟ್ಟಿನಲ್ಲಿ ಅವರು ನಮ್ಮ ಕುಟುಂಬದ ಆಪ್ತರಲ್ಲೊಬ್ಬರು. ಡಿ.ಕೆ. ಶಿವಕುಮಾರ್‌ ಅವರು ಗೀತಾ ಶಿವರಾಜ್‌ಕುಮಾರ್‌ ಅವರ ಮನೆಗೆ ಭೇಟಿ ನೀಡಿದ್ದನ್ನು ಮಧು ಬಂಗಾರಪ್ಪ ಅವರನ್ನು ಕಾಂಗ್ರೆಸ್‌ಗೆ ಸೆಳೆಯಲು ಯತ್ನಿಸುತ್ತಿದ್ದಾರೆ ಎನ್ನುವ ವದಂತಿ ಹಬ್ಬಿದೆ. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ನಾನು ಈಗಲೂ ಜೆಡಿಎಸ್‌ನಲ್ಲಿಯೇ ಇದ್ದು, ಇನ್‌ ಆ್ಯಕ್ಟಿವ್‌ ಕಾರ್ಯಾಧ್ಯಕ್ಷನಾಗಿದ್ದೇನೆ ಎಂದು ಮಾಜಿ ಶಾಸಕ ಮಧು ಬಂಗಾರಪ್ಪ ಪುನರುಚ್ಚರಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next