Advertisement

Land: ಕುಮ್ಕಿ ಜಮೀನು ಲೀಸ್‌ಗೆ ನೀಡಲು ಪರಿಶೀಲನೆ: ಸಚಿವ ಕೃಷ್ಣ ಬೈರೇಗೌಡ

12:29 AM Jul 23, 2024 | Team Udayavani |

ಬೆಂಗಳೂರು: ಅನುಭೋಗಿಸುತ್ತಿರುವವರ ಹೆಸರಿಗೇ ಕುಮ್ಕಿ ಜಮೀನನ್ನು ಮಂಜೂರು ಮಾಡಲು ನಿಯಮಗಳಲ್ಲಿ ಅವಕಾಶ ಇಲ್ಲ. ಆದರೆ “ಲೀಸ್‌’ಗೆ ನೀಡಲು ಸಾಧ್ಯವೇ ಎಂಬ ಬಗ್ಗೆ ಪರಿಶೀಲಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಸರಕಾರ ಸಕಾರಾತ್ಮಕವಾಗಿ ಸ್ಪಂದಿಸಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಸ್ಪಷ್ಟಪಡಿಸಿದರು.

Advertisement

ಸೋಮವಾರ ಪ್ರಶ್ನೋತ್ತರ ವೇಳೆ ಬಿಜೆಪಿಯ ವಿ. ಸುನಿಲ್‌ ಕುಮಾರ್‌ ವಿಷಯ ಪ್ರಸ್ತಾವಿಸಿ, ಈಗಾಗಲೇ ಕುಮ್ಕಿ ಜಮೀನುಗಳಲ್ಲಿ ವಿಶೇಷವಾಗಿ ಕರಾವಳಿ ಭಾಗದಲ್ಲಿನ ಜನ ಮನೆಗಳನ್ನು ಕಟ್ಟಿಕೊಂಡಿದ್ದಾರೆ. ಅಂತಹವರಿಗೆ ಆ ಜಮೀನುಗಳನ್ನು ಮಂಜೂರು ಮಾಡಿಕೊಡಲು ಸರಕಾರ ಏನು ಕ್ರಮ ಕೈಗೊಂಡಿದೆ ಎಂದು ಕೇಳಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಜಮೀನಿಗೆ ಹೊಂದಿಕೊಂಡ ಅರಣ್ಯ ಪ್ರದೇಶದ ಜಾಗದಲ್ಲಿ ಉಪ ಉತ್ಪನ್ನಗಳನ್ನು ಪಡೆಯಲು ಹಕ್ಕು ಇದೆಯೇ ಹೊರತು ಆ ಜಾಗವನ್ನು ಮಂಜೂರು ಮಾಡಲು ನಿಯಮದಲ್ಲಿ ಅವಕಾಶ ಇಲ್ಲ. ಈ ಹಿನ್ನೆಲೆಯಲ್ಲಿ ಲೀಸ್‌ಗೆ ನೀಡಲು ಸಾಧ್ಯವೇ ಎಂಬ ಬಗ್ಗೆ ಪರಿಶೀಲಿಸಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next