Advertisement

ಜಮೀನು ಮಾರಾಟ: ಸರ್ಕಾರಕ್ಕೆ ನೋಟಿಸ್‌

12:36 AM Jan 01, 2020 | Lakshmi GovindaRaj |

ಬೆಂಗಳೂರು: ಸರ್ಕಾರಿ ಜಮೀನನ್ನು ಖಾಸಗಿಯವರಿಗೆ ಕಾನೂನು ಬಾಹಿರವಾಗಿ ಮಾರಾಟ ಮಾಡಲು ಸಹಕರಿಸಿದ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಜಿಲ್ಲೆಯ ಭೂ ದಾಖಲೆಗಳ ಉಪ ನಿರ್ದೇಶಕಿ ಪಿ.ಎಸ್‌. ಕುಸುಮಲತಾ ಅವರು ಹೊಂದಿದ್ದ ಅರೆ ನ್ಯಾಯಿಕ ಅಧಿಕಾರವನ್ನು ಮೊಟಕಗೊಳಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌ ಜಾರಿಗೊಳಿಸಿದೆ.

Advertisement

ಆಯುಕ್ತರಿಗೆ ನೋಟಿಸ್‌: ಈ ಕುರಿತಂತೆ ಪಿ.ಎಸ್‌. ಕುಸುಮಲತಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಎಸ್‌.ಸುಜಾತ ಅವರಿದ್ದ ರಜಾಕಾಲದ ಏಕಸದಸ್ಯ ನ್ಯಾಯಪೀಠ, ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಮತ್ತು ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರಿಗೆ ನೋಟಿಸ್‌ ಜಾರಿ ಮಾಡಿದೆ.

ಮುಳ್ಳೂರು ಗ್ರಾಮದ ಸರ್ವೇ ನಂ. 49/7ರಲ್ಲಿ (ಹೊಸ ಸರ್ವೇ ನಂ 114) 4 ಎಕರೆ 2 ಗುಂಟೆ ಸರ್ಕಾರಿ ಜಮೀನನ್ನು ಅರ್ಜಿದಾರರು ಖಾಸಗಿ ವ್ಯಕ್ತಿಗಳಿಗೆ ಅಕ್ರಮವಾಗಿ ಮಂಜೂರು ಮಾಡಿದ್ದಾರೆ ಎಂದು ಆರೋಪಿಸಿ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರಿಗೆ ಫಾದರ್‌ ಮ್ಯಾಥ್ಯೂ ಎಂಬುವರು ದೂರು ನೀಡಿದ್ದರು. ಆಯುಕ್ತರ ನಿರ್ದೇಶನದ ಮೇರೆಗೆ ಈ ಬಗ್ಗೆ ಬೆಂಗಳೂರು ಉತ್ತರ ಉಪ ವಿಭಾಗಾಧಿಕಾರಿ ವಿಚಾರಣೆ ನಡೆಸಿ, ವರದಿ ಸಲ್ಲಿಸಿದ್ದರು.

ಇದೇ ಪ್ರಕರಣ ಸಂಬಂಧ ಕುಸುಮಲತಾ ಮತ್ತಿತರರ ವಿರುದ್ಧ ವಿಲ್ಸನ್‌ ಗಾರ್ಡನ್‌ ಠಾಣೆಯಲ್ಲಿ ಎಫ್ಐಆರ್‌ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಕುಸುಮಲತಾ ಅವರು ತಮ್ಮ ಅರೆ ನ್ಯಾಯಿಕ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಪ್ರಾದೇಶಿಕ ಆಯುಕ್ತರು ತಿಳಿಸಿದ್ದರು.

ನಂತರ ಕುಸುಮಲತಾ ಅವರನ್ನು ಬೆಂಗಳೂರು ನಗರ ಜಿಲ್ಲಾ ಭೂ ದಾಖಲೆಗಳ ಉಪ ನಿರ್ದೇಶಕಿ ಹುದ್ದೆಯಿಂದ ಅಮಾನತ್ತಿನಲ್ಲಿರಿಸಿ, ಅವರ ಮುಂದೆ ವಿಚಾರಣೆಗೆ ಬಾಕಿಯಿದ್ದ ಪ್ರಕರಣಗಳನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ವಿಭಾಗದ ಭೂ ದಾಖಲೆಗಳ ಉಪ ನಿರ್ದೇಶಕರಿಗೆ ವರ್ಗಾಯಿಸಿ 2019ರ ಡಿ.23ರಂದು ಆದೇಶ ಹೊರಡಿಸಿದ್ದರು.

Advertisement

ಈ ಆದೇಶವನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಿ ರುವ ಕುಸುಮಲತಾ ಅವರು, ಪ್ರಾದೇಶಿಕ ಆಯುಕ್ತರು ವ್ಯಾಪ್ತಿ ಮೀರಿ ಆದೇಶ ಹೊರಡಿ ಸಿದ್ದಾರೆ. ಇಂತಹ ಆದೇಶ ಹೊರಡಿಸಲು ಅವರು ಸಕ್ಷಮ ಪ್ರಾಧಿಕಾರವಲ್ಲ. ಕಂದಾಯ ಪ್ರಕರಣಗ ಳಲ್ಲಿ ರಾಜ್ಯ ಸರ್ಕಾರ ಮುಖ್ಯ ನಿಯಂತ್ರಣ ಪ್ರಾಧಿ ಕಾರವಾಗಿರುತ್ತದೆ. ಆದ್ದರಿಂದ ಪ್ರಾದೇಶಿಕ ಆಯು ಕ್ತರ ಆದೇಶ ರದ್ದುಪಡಿಸುವಂತೆ ಕೋರಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next