Advertisement
ತೀವ್ರ ಗಾಳಿ ಮಳೆಗೆ ಘಾಟಿಯ ಮೂರನೇ ತಿರುವಿನ ಬಳಿ ಎರಡು ಮರಗಳು ರಸ್ತೆಗೆ ಉರುಳಿ ಬಿದ್ದಿದ್ದು, ಅದರೊಂದಿಗೆ ಲಘು ಪ್ರಮಾಣದ ಗುಡ್ಡ ಕುಸಿತ ಉಂಟಾಗಿದೆ. ಮರಗಳು ರಸ್ತೆಗೆ ಬಿದ್ದ ಪ್ರದೇಶದಲ್ಲಿ ಒಂದು ವಾಹನ ಮಾತ್ರ ಸಂಚರಿಸುವಷ್ಟು ಸ್ಥಳವಕಾಶ ಇದ್ದರೂ ಎರಡು ಕಡೆಯಿಂದ ವಾಹನ ಸಂಚಾರ ನಡೆಸಿದ್ದರಿಂದ ಟ್ರಾಫಿಕ್ ಜಾಮ್ ಸಮಸ್ಯೆ ಎದುರಾಯಿತು.
Related Articles
Advertisement
ಸ್ಥಳಕ್ಕೆ ಗೃಹರಕ್ಷಕದಳ, ಅರಣ್ಯ ಇಲಾಖೆ ಸಿಬಂದಿ ಹಾಗೂ ಹೆದ್ದಾರಿ ಇಲಾಖೆ ಸೂಚನೆಯಂತೆ ಜೆಸಿಬಿ ಮೂಲಕ ಮರ ಹಾಗೂ ಮಣ್ಣು ತೆರವುಗೊಳಿಸಿ ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿ ಕೊಡಲಾಯಿತು. ಲಘು ಪ್ರಮಾಣದ ಗುಡ್ಡ ಕುಸಿತ ಉಂಟಾಗಿದ್ದು, ಇಲ್ಲಿ ಯಾವುದೇ ಹೆಚ್ಚಿನ ಸಮಸ್ಯೆ ಉಂಟಾಗಿಲ್ಲ ಎಂದು ರಾಷ್ಟ್ರೀಯ ಹೆದ್ದಾರಿ ಇಲಾಖೆ ತಿಳಿಸಿದೆ.