ಶ್ರೀರಂಗಪಟ್ಟಣ: ಹನಿ ನೀರಾವರಿ ಯೋಜನೆಯಡಿ 3.70 ಕೋಟಿ ರೂ. ವೆಚ್ಚದಲ್ಲಿ ತಾಲೂಕಿನ ಗಣಂಗೂರು, ಆಲ ಗೂಡು, ಜಕ್ಕನಹಳ್ಳಿ ಮತ್ತಿತರ ಗ್ರಾಮಗಳಲ್ಲಿ 6 ಚೆಕ್ ಡ್ಯಾಂಗಳನ್ನು ನಿರ್ಮಿಸಲಾಗುತ್ತಿದೆ ಎಂದು ಶಾಸಕ ರವೀಂದ್ರ ಶ್ರೀಕಂಠಯ್ಯ ಹೇಳಿದರು.
ತಾಲೂಕಿನ ಕಾಳೇನಹಳ್ಳಿ ರಸ್ತೆಗೆ ಲೋಕೋಪಯೋಗಿ ಇಲಾಖೆ ವತಿಯಿಂದ ರಸ್ತೆ ಅಭಿವೃದ್ಧಿ ಹಾಗೂ ಚೆಕ್ ಡ್ಯಾಂಗಳಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಹಳ್ಳಕೊಳ್ಳಗಳಲ್ಲಿ ಹರಿದು ವ್ಯರ್ಥವಾಗುವ ನೀರನ್ನು ನಿಲ್ಲಿಸಿ ಅಂತರ್ಜಲ ಹೆಚ್ಚಿಸುವ ಉದ್ದೇಶದಿಂದ ರೈತರಿಗೆ ಅನುಕೂಲವಾಗುವ ಉದ್ದೇಶದಿಂದ ಚೆಕ್ ಡ್ಯಾಂಗಳನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದು ಹೇಳಿದರು. ಲೋಕೋಪಯೋಗಿ ಇಲಾಖೆ ವತಿಯಿಂದ ಟಿ.ಎಂ.
ಹೊಸೂರು ಮೂಲಕ ಹಾದು ಹೋಗುವ ಕಾಳೇನಹಳ್ಳಿ ರಸ್ತೆ ಹಾಗೂ ಗಣಂಗೂರು ಗ್ರಾಮದಲ್ಲಿ 17 ಲಕ್ಷ ರೂ. ವೆಚ್ಚದಲ್ಲಿ 155 ಮೀಟರ್ ಗ್ರಾಮ ಪರಿಮಿತಿ ರಸ್ತೆ ಅಭಿವೃದ್ಧಿ, ಟಿ.ಎಂ. ಹೊಸೂರು ಗ್ರಾಮದಲ್ಲಿ 27 ಲಕ್ಷ ರೂ. ವೆಚ್ಚದಲ್ಲಿ 120 ಮೀಟರ್ ಉದ್ದದ ರಸ್ತೆ ಅಭಿವೃದ್ಧಿ ಕಾಮಗಾರಿ ಹಾಗೂ ಚರಂಡಿ ಅಭಿವೃದ್ಧಿ, ಬಸ್ತೀಪುರ ಗ್ರಾಮದಲ್ಲಿ 50 ಲಕ್ಷ ವೆಚ್ಚದಲ್ಲಿ 350 ಮೀಟರ್ ಉದ್ದದ ರಸ್ತೆ ಅಭಿವೃದ್ಧಿ 300 ಮೀಟರ್ ಉದ್ದ ಚರಂಡಿ ಅಭಿವೃದ್ಧಿ ಕಾಮಗಾರಿ, ಮಜ್ಜಿಗೆಪುರ, ಪಾಲಹಳ್ಳಿ ಗ್ರಾಮದಲ್ಲಿ 20 ಲಕ್ಷ ರೂ. ವೆಚ್ಚದಲ್ಲಿ 250 ಮೀಟರ್ ಉದ್ದ ರಸ್ತೆ ಹಾಗೂ 200 ಮೀಟರ್ ಚರಂಡಿ, ಬೆಳಗೊಳ ಗ್ರಾಮದಲ್ಲಿ 35 ಲಕ್ಷ ರೂ. ವೆಚ್ಚದಲ್ಲಿ 400 ಮೀಟರ್ ರಸ್ತೆ ಹಾಗೂ 370 ಮೀಟರ್ ಉದ್ದ ಚರಂಡಿ, ಕೆಆರ್‌ಎಸ್‌ನಲ್ಲಿ 20 ಲಕ್ಷ ರೂ. ವೆಚ್ಚದಲ್ಲಿ 200 ಮೀಟರ್ ರಸ್ತೆ ಹಾಗೂ ಚರಂಡಿ ಅಭಿವೃದ್ಧಿ ಹಾಗೂ ಹುಲಿಕೆರೆ ಗ್ರಾಮದಲ್ಲಿ 20 ಲಕ್ಷ ರೂ. ವೆಚ್ಚದಲ್ಲಿ 240 ಮೀಟರ್ ಉದ್ದದ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯೆ ಸವಿತಾ, ಕೆಆರ್‌ಎಸ್ ಗ್ರಾಪಂ ಅಧ್ಯಕ್ಷೆ ಚಂದ್ರಕಲಾ, ಗ್ರಾಪಂ ಸದಸ್ಯರಾದ ಮಂಜು, ರಾಜು, ರಾಮೇಗೌಡ, ಕುಮಾರ, ಗ್ರಾಪಂ ಮಾಜಿ ಅಧ್ಯಕ್ಷರಾದ ಬಸವರಾಜು, ಲಕ್ಷ್ಮೀ, ಗವಿಸಿದ್ದೇಗೌಡ, ಮುಖಂಡ ಶ್ರೀಧರ್ ಹಾಜರಿದ್ದರು.