Advertisement

ಕಾಂಕ್ರಿಟ್‌ ರಸ್ತೆ ಕಾಮಗಾರಿಗೆ ಭೂಮಿಪೂಜೆ

03:24 PM Nov 04, 2019 | Suhan S |

ದೋಟಿಹಾಳ: ಹಳ್ಳಿಗಳಲ್ಲಿ ಅಭಿವೃದ್ಧಿ ಮಾಡಲು ಶಾಸಕರು ಮುಂದಾಗಿದ್ದಾರೆ ಎಂದು ಗ್ರಾಪಂ ಅಧ್ಯಕ್ಷ ಗೌಸುಸಾಬ್‌ ಕೊಣ್ಣುರು ಅವರು ಹೇಳಿದರು.

Advertisement

ಗ್ರಾಮದಲ್ಲಿ ನಾಲ್ಕು ಕಡೆಗಳಲ್ಲಿ ಎಚ್‌ ಕೆಡಿಪಿ ಯೋಜನೆಯ ಅಲ್ಪಸಂಖ್ಯಾತರ ಕೋಟಾದಲ್ಲಿ ಸುಮಾರು 40 ಲಕ್ಷ ರೂ. ವೆಚ್ಚದ ಕಾಂಕ್ರೀಟ್‌ ರಸ್ತೆಯ ಕಾಮಗಾರಿಗೆ ಅನುದಾನ ನೀಡಿದ್ದಾರೆ ಎಂದು ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು. ಹಲವು ಕಡೆಗಳಲ್ಲಿ ನೀರು ನಿಂತು ರಸ್ತೆಗಳು ಕೆಸರು ಗದ್ದೆಯಂತೆಯಾಗಿದ್ದವು. ಇದನ್ನು ಮನಗಂಡ ಶಾಸಕರು ತಮ್ಮ ಅನುದಾನದಲ್ಲಿ ಗ್ರಾಮದ ನಾಲ್ಕು ಕಡೆಗಳಲ್ಲಿ ಕಾಂಕ್ರೀಟ್‌ ರಸ್ತೆ ನಿರ್ಮಾಣ ಮಾಡಲು ಹಣ ನೀಡಿದ್ದಾರೆ ಎಂದು ಹೇಳಿದರು. ಗ್ರಾಪಂ ಸದಸ್ಯ ರಾಜೇಸಾಬ್‌

ಯಲಬುರ್ಗಿ ಅವರು ಮಾತನಾಡಿ, ಈ ಭಾಗದ ಸಾರ್ವಜನಿಕರ ಬಹುದಿನಗಳ ಬೇಡಿಕೆಯನ್ನು ಶಾಸಕರು ಇಂದು ಈಡೇರಿಸಿರುವುದು ಸಂತೋಷ ತಂದಿದೆ ಎಂದು ಹೇಳಿದರು. ಈ ಭೂಮಿ ಪೂಜೆ ಕಾರ್ಯಕ್ರಮವನ್ನು ಶ್ರೀ ಈಶ್ವರಸ್ವಾಮಿಗಳು ಶಾಸ್ತ್ರೋಕ್ತವಾಗಿ ಪೂಜಾ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

ಈ ವೇಳೆ ಗ್ರಾಪಂ ಸದಸ್ಯರಾದ ಕಳಕಪ್ಪ ಗೌಡರ, ದೇವೇಂದ್ರ ಕುರಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಹಾಗೂ ಮಾಜಿ ಅಧ್ಯಕ್ಷ ಕರಿಯಪ್ಪ ಪೂಜಾರಿ, ಕೈಮಗ್ಗ ನೇಕಾರ ಸಹಕಾರ ಸಂಘದ ನಿರ್ದೇಶಕ ಹಾಗೂ ಮಾಜಿ ಅಧ್ಯಕ್ಷ ರಾಜೇಸಾಬ್‌ ತಾಸೇದ್‌, ಗುತ್ತೇಗೆದಾರರ ಸಿಬ್ಬಂದಿ, ಗ್ರಾಮಸ್ಥರಾದ ಸುರೇಶ ಹುನಗುಂದ, ಮಹೇಶ ಕಾಳಗಿ, ಚನ್ನಪ್ಪ ಸಕ್ರಿ ಹಾಗೂ ಗ್ರಾಮಸ್ಥರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next