Advertisement

ಸಮಗ್ರ ಅಭಿವೃದ್ಧಿಗೆ ಸಹಕಾರ: ಶಾಸಕ

02:55 PM Mar 10, 2021 | Team Udayavani |

ದೇವನಹಳ್ಳಿ: ತಾಲೂಕಿನ ಸಮಗ್ರ ಅಭಿವೃದ್ಧಿಗೆ ಅಗತ್ಯ ಸಹಕಾರ ನೀಡಲಾಗುತ್ತಿದ್ದು, ಭವಿಷ್ಯದಲ್ಲಿ ಜಿಲ್ಲಾ ಕ್ರೀಡಾಂಗಣ ಮಾಡಬೇಕೆಂದು ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದು ಶಾಸಕ ಎಲ್‌.ಎನ್‌ .ನಾರಾಯಣಸ್ವಾಮಿ ತಿಳಿಸಿದರು.

Advertisement

ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಆಟದ ಮೈದಾನದಲ್ಲಿ ಜಿಲ್ಲಾಡಳಿತ, ಜಿಪಂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ನಗರದ ಕ್ರೀಡಾಂಗಣದಲ್ಲಿ ಒಳಕ್ರೀಡಾಂ ಗಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಕಬಡ್ಡಿ, ಕುಸ್ತಿ ಪಂದ್ಯಾವಳಿಗೆ ಒಳ ಕ್ರೀಡಾಂಗಣ ಅಗತ್ಯ ಇದ್ದು, 60 ಲಕ್ಷ ರೂ. ಅನುದಾನ ಬಿಡುಗಡೆ ಮಾಡಲಾಗಿದೆ. ಅದರಲ್ಲಿಯೇ ಒಳ ಕ್ರೀಡಾಂಗಣ ನಿರ್ಮಾಣಕ್ಕಾಗಿ ಶಂಕುಸ್ಥಾಪನೆ ಮಾಡಲಾಗಿದ್ದು, ನಿರ್ಮಾಣವಾಗಲಿ ರುವ ಕ್ರೀಡಾಂಗಣವನ್ನು ಕ್ರೀಡಾಪಟುಗಳು ಸದ್ಭಳಕೆ ಮಾಡಿಕೊಳ್ಳುವುದರ ಮೂಲಕ ಮಾದರಿಯಾಗಬೇಕು ಎಂದರು.

ವಿದ್ಯಾರ್ಥಿಗಳಲ್ಲಿ ಕ್ರೀಡಾಸ್ಫೂರ್ತಿ ಬೆಳೆಸುವಂತೆ ಆಗಬೇಕು. ಇತ್ತಿಚೆಗಿನ ದಿನಗಳಲ್ಲಿ ಯುವಕರು ದುಷcಟ ಗಳಿಗೆ ಬಲಿಯಾಗುತ್ತಿದ್ದು, ಕ್ರೀಡಾ ಚಟುವಟಿಕೆಯಲ್ಲಿ ಪಾಲ್ಗೊಳ್ಳಬೇಕು ಎಂದು ಹೇಳಿದರು. ತಾಲೂಕಿನ ಕೀರ್ತಿ ಹೆಚ್ಚಿಸಿ: ಜಿಪಂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಸಿ.ಮಂಜುನಾಥ್‌ಮಾತನಾಡಿ, ದೇಸಿ ಕ್ರೀಡೆಗಳನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಕಬಡ್ಡಿ ಮತ್ತು ಕುಸ್ತಿಗಳಿಗೆ ಒಳಾಂಗಣ ಕ್ರೀಡಾಂಗಣವನ್ನು ನಿರ್ಮಿ ಸುತ್ತಿರುವುದು ಉತ್ತಮವಾದ ಬೆಳವಣಿಗೆಯಾಗಿದೆ. ಪ್ರತಿ ಕ್ರೀಡಾಪಟುಗಳು ದಿನನಿತ್ಯ ಕಸರತ್ತು, ಅಭ್ಯಾಸಗಳನ್ನು ಮಾಡಿ ಜಿಲ್ಲೆ, ರಾಜ್ಯ ಮತ್ತು ರಾಷ್ಟ್ರ ಸೇರಿದಂತೆ ದೇಶ-ವಿದೇಶಗಳಲ್ಲಿ ತಾಲೂಕಿನ ಕೀರ್ತಿಯನ್ನು ಹೆಚ್ಚಿಸುವಂತೆ ಆಗಬೇಕು ಎಂದು ಹೇಳಿದರು.

ಜಿಪಂ ಉಪಾಧ್ಯಕ್ಷೆ ರೂಪಾ, ಕೆಪಿಸಿಸಿ ರಾಜ್ಯ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಸಿ.ಜಗನ್ನಾಥ್‌, ಜಿಪಂ ಸದಸ್ಯೆ ಅನಂತಕುಮಾರಿ, ಪುರಸಭಾ ಅಧ್ಯಕ್ಷೆ ರೇಖಾ, ಪುರಸಭಾ ಸ್ಥಾಯಿ ಸಮಿತಿ ಅಧ್ಯಕ್ಷ ಎಸ್‌.ನಾಗೇಶ್‌, ಪುರಸಭಾ ಸದಸ್ಯ ಜಿ.ಎ.ರವೀಂದ್ರ, ರಘು, ವೇಣುಗೋಪಾಲ್‌, ಮುನಿಕೃಷ್ಣ, ಜಿಲ್ಲಾ ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆಸಹಾಯಕ ನಿರ್ದೇಶಕಿ ಗೀತಾ, ಪುರಸಭಾ ಮುಖ್ಯಾಧಿಕಾರಿ ಎ.ಎಚ್‌.ನಾಗರಾಜ್‌, ಎಂಜಿನಿಯರ್‌ ಗಜೇಂದ್ರ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next