ಶಿರ್ವ: ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯ ಹಂತ 3 ರ ಅಡಿಯಲ್ಲಿ ಮಂಜೂರಾದ ಸುಮಾರು 4.76 ಕೋ.ರೂ. ವೆಚ್ಚದ 6.36 ಕಿ.ಮೀ. ಉದ್ದದ ಕುಂತಲನಗರ ವಯಾ ಮಾಧವನಗರದಿಂದ ಬಂಟಕಲ್ಲು ರಸ್ತೆ ಅಭಿವೃದ್ಧಿ ಕಾಮಗಾರಿಗೆ ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಎಸ್.ಬೊಮ್ಮಾಯಿ ಅ. 13ರಂದು ಕುಂತಲ ನಗರದಲ್ಲಿ ಭೂಮಿ ಪೂಜೆ ನೆರವೇರಿಸಿದರು.
ವೇ|ಮೂ| ವಿಖ್ಯಾತ್ ಭಟ್ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದರು. ಬೆಳ್ಳೆ ಗ್ರಾ.ಪಂ. ಅಧ್ಯಕ್ಷ ಸುಧಾಕರ ಪೂಜಾರಿ ಮುಖ್ಯಮಂತ್ರಿ ಬಸವರಾಜ್ ಎಸ್.ಬೊಮ್ಮಾಯಿ ಅವರನ್ನು ಬೆಳ್ಳೆ ಗ್ರಾ.ಪಂ. ವತಿಯಿಂದ ಗೌರವಿಸಿದರು.
ಕಾರ್ಯಕ್ರಮದಲ್ಲಿ ರಾಜ್ಯ ಸಚಿವರಾದ ವಿ.ಸುನೀಲ್ ಕುಮಾರ್, ಕೋಟಾ ಶ್ರೀನಿವಾಸ ಪೂಜಾರಿ, ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ಉಡುಪಿ ಶಾಸಕ ರಘುಪತಿ ಭಟ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಜಿ.ಪಂ. ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ| ನವೀನ್ ಭಟ್ ವೈ.,ತಹಶೀಲ್ದಾರ್ ಪ್ರದೀಪ್ ಕುರ್ಡೇಕರ್, ಕಾಪು ತಾ.ಪಂ. ಕಾರ್ಯನಿರ್ವಹಣಾಧಿಕಾರಿ ವಿವೇಕಾನಂದ ಗಾಂವ್ಕರ್ ,ಬಿಜೆಪಿ ಮುಖಂಡರಾದ ಉದಯ ಕುಮಾರ್ ಶೆಟ್ಟಿ, ಸುರೇಶ್ ಶೆಟ್ಟಿ ಗುರ್ಮೆ,ಬೆಳ್ಳೆ ಗ್ರಾ.ಪಂ. ಉಪಾಧ್ಯಕ್ಷೆ ಸಂಧ್ಯಾ ಎಂ. ಶೆಟ್ಟಿ, ಗ್ರಾ.ಪಂ. ಸದಸ್ಯರು,ಪಿಡಿಒ ವಸಂತಿ ಬಾಯಿ, ಗ್ರಾಮ ಕರಣಿಕ ಪ್ರದೀಪ್,ಗುತ್ತಿಗೆದಾರ ಉದಯ ಕುಮಾರ್ ಶೆಟ್ಟಿ ಮುನಿಯಾಲು ಮತ್ತಿತರರು ಉಪಸ್ಥಿತರಿದ್ದರು.
ಅಶ್ವಿನ್ ಲಾರೆನ್ಸ್ ಮೂಡುಬೆಳ್ಳೆ ಕಾರ್ಯಕ್ರಮ ನಿರೂಪಿಸಿದರು.