Advertisement

ನ್ಯೂಜೆರ್ಸಿಯಲ್ಲಿ ಕಾಲಭೈರವೇಶ್ವರ ದೇವಾಲಯಕ್ಕೆ ಭೂಮಿ ಪೂಜೆ

06:38 AM Jul 01, 2019 | Team Udayavani |

ಬೆಂಗಳೂರು: ಅಮೆರಿಕ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ನ್ಯೂಜೆರ್ಸಿಯ ಸೋಮರೈಟ್‌ನಲ್ಲಿ ಆದಿಚುಂಚನಗಿರಿ ಮಠದ ವತಿಯಿಂದ ನಿರ್ಮಿಸುತ್ತಿರುವ ಕಾಲಭೈರವೇಶ್ವರ ಸ್ವಾಮಿ ದೇವಾಲಯದ ಭೂಮಿ ಪೂಜೆಗೆ ಸಂಬಂಧಿಸಿದ ಧಾರ್ಮಿಕ ವಿಧಿ ವಿಧಾನಗಳಲ್ಲಿ ಪಾಲ್ಗೊಂಡಿದ್ದರು.

Advertisement

ಇಪ್ಪತ್ತು ಎಕರೆ ಪ್ರದೇಶದಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ದೇವಾಲಯದ ಬಗ್ಗೆ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಮುಖ್ಯಮಂತ್ರಿಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ, ಈ ದೇವಾಲಯವು ಭಾರತೀಯರ ಅದರಲ್ಲೂ ಕನ್ನಡಿಗರ ಪ್ರಮುಖ ಸಾಂಸ್ಕೃತಿಕ ಕೇಂದ್ರವಾಗಿ ರೂಪುಗೊಳ್ಳಲಿದೆ ಎಂದು ಹೇಳಿದರು.

ಹೊರನಾಡ ಕನ್ನಡಿಗರು ತಮ್ಮ ಬೇರನ್ನು ಬಲಪಡಿಸಲು ಸಂಸ್ಕೃತಿಯೊಂದಿಗೆ ಬೆಸೆದುಕೊಳ್ಳಲು ಇಂತಹ ಸಾಂಸ್ಕೃತಿಕ ಕೇಂದ್ರಗಳು ಪ್ರಮುಖ ಪಾತ್ರ ವಹಿಸುತ್ತವೆ . ಇಲ್ಲಿ ನೆಲೆಸಿರುವ ಕನ್ನಡಿಗರು ಈ ದೇವಾಲಯದ ನಿರ್ಮಾಣ ಕಾರ್ಯದಲ್ಲಿ ಮನಃಪೂರ್ವಕವಾಗಿ ಕೈ ಜೋಡಿಸಬೇಕು ಎಂದು ತಿಳಿಸಿದರು.

ಸಣ್ಣ ನೀರಾವರಿ ಸಚಿವ ಸಿ.ಎಸ್‌.ಪುಟ್ಟರಾಜು, ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್‌, ವಿಧಾನಪರಿಷತ್‌ ಸದಸ್ಯ ಎಸ್‌.ಎಲ್‌.ಭೋಜೇಗೌಡ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next