Advertisement

ನಂದಿಬೆಟದಲ್ಲಿ ಮತ್ತೆ ಭೂಕುಸಿತ: ಆತಂಕ

05:37 PM Sep 07, 2022 | Team Udayavani |

ಚಿಕ್ಕಬಳ್ಳಾಪುರ: ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯಮಟ್ಟದಲ್ಲಿ ಖ್ಯಾತಿ ಹೊಂದಿರುವ ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿಗಿರಿಧಾಮದಲ್ಲಿ ಮತ್ತೂಮ್ಮೆ ಭೂಕುಸಿತದಿಂದ ಗ್ರಾಮಸ್ಥರ ಆತಂಕ ಮೂಡಿದೆ.

Advertisement

ಕಳೆದ ಸಾಲಿನಲ್ಲಿ ಭೂಕುಸಿತದಿಂದ ನಂದಿ ಬೆಟ್ಟಕ್ಕೆ ತೆರಳುವ ಮಾರ್ಗವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ನಂತರ ಜಿಲ್ಲಾಡಳಿತ ನೂತನ ರಸ್ತೆ ಮತ್ತು ಸೇತುವೆಯನ್ನು ನಿರ್ಮಿಸಿದ ಬಳಿಕ ಸಾರ್ವಜನಿಕ ಸಂಚಾರಕ್ಕೆ ಮುಕ್ತಗೊಳಿಸಲಾಗಿತ್ತು. ಇದೀಗ ಮತ್ತೂಮ್ಮೆ ಸುಲ್ತಾನ್‌ ಪೇಟೆಯ ಸುತ್ತಮುತ್ತಲಿನ ಪ್ರದೇಶದಲ್ಲಿ ಭೂಕುಸಿತ ಕಂಡುಬಂದಿದ್ದು ರೈತರು ಮತ್ತು ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ.

ಸುಲ್ತಾನ್‌ ಪೇಟೆ ಸನ್ನಿಹದಲ್ಲಿರುವ ಶ್ರೀ ವೀರಭದ್ರಸ್ವಾಮಿ ದೇಗುಲದ ಮುಂಭಾಗದಲ್ಲಿಭೂಕುಸಿತ ಕಂಡು ಬಂದಿದೆ ರಾತ್ರಿ ಸುರಿದ ಮಳೆಯಿಂದಾಗಿ ಅವಾಂತರ ಸೃಷ್ಟಿಯಾಗಿದೆ ಎಂದುತಿಳಿದು ಬಂದಿದೆ. ನಂದಿಗಿರಿ ಗ್ರಾಮದ ಎರಡು ಕಡೆ ಭೂಕುಸಿತ ಕಂಡು ಬಂದಿದೆ. ಇದರಿಂದ ಬೆಟ್ಟದ ಕೆಳಭಾಗದ ನಿವಾಸಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಭೂಕುಸಿತದಿಂದ ಈಗ ಮಣ್ಣು ಮತ್ತು ನೀರು ಹರಿದು ಬರುತ್ತಿದೆ. ಒಂದು ವೇಳೆ ಗುಂಡು ಕಲ್ಲುಗಳು ಬಂದರೆ ಏನು ಮಾಡಬೇಕು ಚಿಂತೆಗೊಳಗಾಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next