ಡೆಹ್ರಾಡೂನ್: ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯ ಸಿಲ್ಕ್ಯಾರಾ-ಬರ್ಕೋಟ್ ಬಳಿ ಸುರಂಗ ಕುಸಿದು ೪೦ ಮಂದಿ ಕಾರ್ಮಿಕರು ಸಿಲುಕಿದ್ದು ಅವರ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿರುವ ವೇಳೆ ಮತ್ತೆ ಅದೇ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದ ಇಬ್ಬರು ಸಿಬ್ಬಂದಿಗಳು ಗಾಯಗೊಂಡಿದ್ದಾರೆ ಎನ್ನಲಾಗಿದೆ.
ಭೂ ಕುಸಿತ ಸಂಭವಿಸಿದ ಹಿನ್ನೆಲೆಯಲ್ಲಿ ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರ ಕಾರ್ಯಾಚರಣೆಗೆ ಮತ್ತೆ ಅಡ್ಡಿ ಉಂಟಾಗಿದೆ, ಕಾರ್ಯಾಚರಣೆ ನಡೆಸುತ್ತಿರುವ ಸ್ಥಳದಲ್ಲೇ ಭೂ ಕುಸಿತ ಸಂಭವಿಸುತ್ತಿರುವುದರಿಂದ ಕಾರ್ಯಾಚರಣೆಗೆ ತೊಡಕಾಗಿದೆ.
ಕಾರ್ಮಿಕರನ್ನು ರಕ್ಷಣೆ ಮಾಡಲು ಮಂಗಳವಾರ ರಾತ್ರಿ ಪೈಪ್ ಲೈನ್ ಅಳವಡಿಸಲು ಕಾರ್ಯಾಚರಣೆ ನಡೆಸುತ್ತಿರುವ ವೇಳೆ ಭೂ ಕುಸಿತ ಉಂಟಾಗಿದೆ ಇದರಿಂದ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದ ಸಿಬ್ಬಂದಿಗಳು ಪ್ರಾಣ ಉಳಿಸಿಕೊಳ್ಳಲು ಸುರಂಗದ ಒಳಗಿನಿಂದ ಓಡಿ ಬಂದಿದ್ದಾರೆ ಈ ವೇಳೆ ಕಾಲ್ತುಳಿತ ಉಂಟಾಗಿ ಇಬ್ಬರು ಸಿಬ್ಬಂದಿಗಳು ಗಾಯಗೊಂಡಿದ್ದಾರೆ.
ಇಂದು ಮತ್ತೆ ಕಾರ್ಯಾಚರಣೆ ಮುಂದುವರಿಸಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: Air Pollution: ಹೆಚ್ಚಿದ ವಾಯುಮಾಲಿನ್ಯ… ದೆಹಲಿಯಿಂದ ಜೈಪುರಕ್ಕೆ ತೆರಳಿದ ಸೋನಿಯಾ ಗಾಂಧಿ