Advertisement

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

12:22 PM Apr 25, 2024 | Team Udayavani |

ಅರುಣಾಚಲ ಪ್ರದೇಶ: ಭಾರಿ ಮಳೆಯಿಂದಾಗಿ ಅರುಣಾಚಲ ಪ್ರದೇಶದ ಹಲವು ಪ್ರದೇಶಗಳಲ್ಲಿ ಭೂಕುಸಿತ ಸಂಭವಿಸಿದ ವರದಿಯಾಗಿವೆ. ಪರಿಣಾಮ ದಿಬಾಂಗ್ ಕಣಿವೆ ಪ್ರದೇಶಗಳು ಸೇರಿದಂತೆ ಚೀನಾದ ಗಡಿ ಪ್ರದೇಶಗಳ ಸಂಪರ್ಕ ಕಡಿತಗೊಂಡಿದೆ.

Advertisement

ಅಧಿಕಾರಿಗಳ ಪ್ರಕಾರ, ಕಳೆದ ಕೆಲವು ದಿನಗಳಿಂದ ಚೀನಾ ಗಡಿಗೆ ಹೊಂದಿಕೊಂಡಿರುವ ಅರುಣಾಚಲ ಪ್ರದೇಶದಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಇದು ದೊಡ್ಡ ಪ್ರಮಾಣದಲ್ಲಿ ವಿನಾಶಕ್ಕೆ ಕಾರಣವಾಗಿದೆ ಎಂದು ಹೇಳಿದ್ದಾರೆ. ಭೂ ಕುಸಿತದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಧಾರಾಕಾರ ಮಳೆಯಿಂದಾಗಿ ಹಲವೆಡೆ ಭೂಕುಸಿತದ ಘಟನೆಗಳು ಸಂಭವಿಸಿವೆ. ಭೂಕುಸಿತದಿಂದ ಚೀನಾದ ಗಡಿಯಲ್ಲಿರುವ ದಿಬಾಂಗ್ ಕಣಿವೆಯನ್ನು ದೇಶಕ್ಕೆ ಸಂಪರ್ಕಿಸುವ ಏಕೈಕ ಹೆದ್ದಾರಿ ಭೂಕುಸಿತದಲ್ಲಿ ಸಂಪೂರ್ಣವಾಗಿ ನಾಶವಾಗಿದ್ದು ಜೊತೆಗೆ ಹೆದ್ದಾರಿಯ ಒಂದು ಭಾಗ ಕೊಚ್ಚಿ ಹೋಗಿದೆ. ಪರಿಣಾಮ ದಿಬಾಂಗ್ ಕಣಿವೆಯಿಂದ ಬಂದು ಹೋಗುವ ಜನರು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಭೂಕುಸಿತದಿಂದಾಗಿ ರಾಷ್ಟ್ರೀಯ ಹೆದ್ದಾರಿ-33 ಕೂಡ ಹಾನಿಯಾಗಿದೆ. ರಾಷ್ಟ್ರೀಯ ಹೆದ್ದಾರಿ-33ರಲ್ಲಿ ಹುಣಲಿ – ಅನಿನಿ ನಡುವೆ ಭಾರಿ ಭೂಕುಸಿತ ಸಂಭವಿಸಿದೆ ಎಂದು ಹೇಳಲಾಗಿದೆ.

ರಾಷ್ಟ್ರೀಯ ಹೆದ್ದಾರಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ (ಎನ್‌ಎಚ್‌ಐಡಿಸಿಎಲ್) ಹಾನಿಗೊಳಗಾದ ಹೆದ್ದಾರಿಯ ಭಾಗಗಳ ದುರಸ್ತಿ ಕಾರ್ಯವನ್ನು ಪ್ರಾರಂಭಿಸಿದೆ ಆದರೆ ನಿರಂತರ ಮಳೆಯಿಂದಾಗಿ ದುರಸ್ತಿ ಕಾರ್ಯಗಳಿಗೆ ತೊಂದರೆ ಉಂಟಾಗಿದೆ ಎಂದು ಹೇಳಿದ್ದಾರೆ. ಇಲ್ಲಿನ ಪರಿಸ್ಥಿತಿ ಸಹಜ ಸ್ಥಿತಿಗೆ ಬರಲು ಇನ್ನೂ ಮೂರೂ ನಾಲ್ಕು ದಿನಗಳು ಬೇಕಾಗಬಹುದು ಎಂದು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next