ಮಂಗಳೂರು: ಮಂಗಳೂರು ಸೇರಿದಂತೆ ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ಹಲವೆಡೆ ತಗ್ಗು ಪ್ರದೇಶಗಳು ಮುಳುಗಡೆಯಾಗಿದೆ. ನಗರದ ಹೊರವಲಯದ ನೀರುಮಾರ್ಗ ಎಂಬಲ್ಲಿ ರಸ್ತೆ ಬಾಯ್ತೆರೆದರೆ, ಅದ್ಯಪಾಡಿಯಲ್ಲಿ ಗುಡ್ಡ ಕುಸಿತವಾಗಿದೆ.
ನಗರದ ಹೊರವಲಯದ ನೀರುಮಾರ್ಗದಲ್ಲಿ ಕಟಿಂಜಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕುಸಿತವಾಗಿದೆ. ರಸ್ತೆ ಸಂಪೂರ್ಣವಾಗಿ ಎರಡು ಭಾಗವಾಗಿದ್ದು, ಸಂಚಾರ ಸ್ಥಗಿತವಾಗಿದೆ. ವಿದ್ಯುತ್ ಕಂಬಕ್ಕೆ ಹಾನಿಯಾಗಿದೆ.
ಅಳಪೆಯಲ್ಲಿ ಎರಡು ಮನೆಗಳಿಗೆ ಹಾನಿಯಾಗಿದ್ದು, ಇಬ್ಬರು ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ. ಮನೆಯ ಕಂಪೌಂಡ್ ಗೋಡೆಗಳು ಕುಸಿದಿದ್ದು, ಗಾಯಗೊಂಡಿರುವ ಇಬ್ಬರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ: ಉತ್ತರೆಯ ಆರ್ಭಟಕ್ಕೆ ಕರಾವಳಿ ತತ್ತರ: ಭಾರಿ ಮಳೆಗೆ ಹಲವು ಪ್ರದೇಶಗಳು ಜಲಾವೃತ
ಬಜಪೆ ಸಮೀಪದ ಅದ್ಯಪಾಡಿ ಸಮೀಪದಲ್ಲಿ ಗುಡ್ಡ ಕುಸಿತ ಸಂಭವಿಸಿದ್ದು, ರಸ್ತೆಯ ಮೇಲೆ ಮಣ್ಣು ರಾಶಿ ಬಿದ್ದಿದೆ. ಸಂಚಾರ ಅಸ್ತವ್ಯಸ್ತವಾಗಿದೆ.