Advertisement
ಚಾರ್ಮಾಡಿಘಾಟ್ ನ ಅಣ್ಣಪ್ಪ ಸ್ವಾಮಿ ದೇವಸ್ಥಾನದ ಸಮೀಪ ಹಾಗೂ ಘಾಟಿಯ ಮಧ್ಯೆ ಭಾಗದಲ್ಲಿ ಗುಡ್ಡ ಕುಸಿತವಾಗಿದ್ದು, ಇದಾರಿಂದಾಗಿ ವಾಹನ ಸಂಚಾರದಲ್ಲಿ ಅಡಚಣೆ ಉಂಟಾಗಿದೆ. ಗುಡ್ಡ ಕುಸಿತದ ಸ್ಥಳದಲ್ಲಿ ಏಕಮುಖ ಸಂಚಾರಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.
Related Articles
Advertisement
ಚಾರ್ಮಾಡಿ ಘಾಟ್ ನ ಏಳನೇ ತಿರುವಿನಲ್ಲಿ ಬೃಹತ್ ಮರವೊಂದು ರಸ್ತೆಗೆ ಉರುಳಿ ಬಿದ್ದಿದೆ. ಇದರಿಂದಾಗಿ ಎರಡು ಕಿ.ಮೀಟರ್ ಗೂ ಹೆಚ್ಚು ದೂರ ಟ್ರಾಫಿಕ್ ಜಾಮ್ ಉಂಟಾಗಿದ್ದು ವಾಹನ ಸಂಚಾರ ಅಸ್ತವ್ಯಸ್ಥವಾಗಿದೆ.
ಮರ ಬಿದ್ದು ಒಂದು ಗಂಟೆಯಾದರೂ ಯಾವುದೇ ಅಧಿಕಾರಿಗಳು ಸ್ಥಳಕ್ಕೆ ಬಾರದ ಹಿನ್ನಲೆಯಲ್ಲಿ ಅಧಿಕಾರಿಗಳ ವಿರುದ್ಧ ವಾಹನ ಸವಾರರ ಆಕ್ರೋಶ ವ್ಯಕ್ತಪಡಿಸಿದರು.
ಸ್ಥಳೀಯರು, ವಾಹನ ಸವಾರರು ಸೇರಿಕೊಂಡು ರಸ್ತೆಗೆ ಬಿದ್ದ ಮರವನ್ನು ತೆರವು ಕಾರ್ಯ ನಡೆಸಿದರು