Advertisement

ಮಡಿಕೇರಿ-ಸಂಪಾಜೆ ರಾಷ್ಟ್ರೀಯ ಹೆದ್ದಾರಿಗೆ ಮಣ್ಣು ಕುಸಿತ

08:17 PM Jul 23, 2019 | Team Udayavani |

ಸುಳ್ಯ: ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮಡಿಕೇರಿ-ಸಂಪಾಜೆ ನಡುವಿನ ಮದೆನಾಡು ಬಳಿ ಗುಡ್ಡದ ಮಣ್ಣು ರಸ್ತೆಗೆ ಕುಸಿದ ಘಟನೆ ಮಂಗಳವಾರ ಸಂಭವಿಸಿದೆ.

Advertisement

ರಸ್ತೆ ಒಂದು ಪಾರ್ಶ್ವಕ್ಕೆ ಮಣ್ಣು ಬಿದ್ದ ಕಾರಣ ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿಲ್ಲ.

ಹೆದ್ದಾರಿ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ‌ಭೇಟಿ ನೀಡಿ ಪರಿಶೀಲಿಸಿದ್ದು ಮಣ್ಣು ತೆಗೆಯುವ ಕಾರ್ಯ ನಡೆದಿದೆ.

ಕಳೆದ ಬಾರಿ ಪ್ರಾಕೃತಿಕ ವಿಕೋಪದ ಸಂದರ್ಭದಲ್ಲಿ ಇಲ್ಲಿ ಗುಡ್ಡ ಕುಸಿದು ರಸ್ತೆ ಸಂಚಾರ ಸ್ಥಗಿತಗೊಂಡಿತ್ತು. ಅದೇ ಸ್ಥಳದಲ್ಲಿ ಸ್ವಲ್ಪ ಪ್ರಮಾಣದ ಮಣ್ಣು ಕುಸಿದಿದೆ. ವಾಹನ ಸವಾರರು ಆತಂಕ ಪಡುವ ಅಗತ್ಯವಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next