ಉತ್ತರಾಖಂಡ: ಗುರುವಾರ ತಡರಾತ್ರಿ ಉತ್ತರಾಖಂಡದ ರುದ್ರಪ್ರಯಾಗ ಜಿಲ್ಲೆಯಲ್ಲಿ ಭಾರೀ ಮಳೆಯ ಪರಿಣಾಮ ಉಂಟಾದ ಭೂಕುಸಿತದ ನಂತರ ಸುಮಾರು ಹತ್ತಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿರುವ ಕುರಿತು ವರದಿಯಾಗಿದೆ.
ಕಳೆದ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು ಗುರುವಾರ ರಾತ್ರಿ ಕೇದಾರನಾಥ ಯಾತ್ರೆ ಮಾರ್ಗದಲ್ಲಿ ಗೌರಿಕುಂಡ್ ಬಳಿ ಭೂಕುಸಿತ ಸಂಭವಿಸಿದ್ದು ಪರಿಣಾಮ ಮೂರು ಅಂಗಡಿಗಳು ಮಣ್ಣಿನಡಿ ಹೂತು ಹೋಗಿದೆ ಎಂದು ಹೇಳಿದ್ದಾರೆ ಈ ವೇಳೆ ಹತ್ತಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದು ರಕ್ಷಣಾ ತಂಡ ಘಟನಾ ಸ್ಥಳಕ್ಕೆ ದೌಡಾಯಿಸಿದ್ದು ರಕ್ಷಣಾ ಕಾರ್ಯದಲ್ಲಿ ತೊಡಗಿದೆ.
ರಾಜ್ಯ ವಿಪತ್ತು ನಿರ್ವಹಣಾ ಪಡೆಯ (SDRF) ತಂಡವು ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಿದೆ. ಭಾರೀ ಮಳೆಯ ಜೊತೆಗೆ ಗುಡ್ಡಗಾಡುಗಳಿಂದ ಬೀಳುವ ಬಂಡೆಗಳಿಂದ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿವೆ ಎಂದು ಎಸ್‌ಡಿಆರ್‌ಎಫ್ ಹೇಳಿದೆ.
ರುದ್ರಪ್ರಯಾಗ ವಿಪತ್ತು ನಿರ್ವಹಣೆಯ ಅಧಿಕಾರಿಯ ಪ್ರಕಾರ, ಭೂಕುಸಿತದಲ್ಲಿ 10 ರಿಂದ 12 ಜನರು ಸಮಾಧಿ ಅಥವಾ ಕೊಚ್ಚಿಹೋಗುವ ಭೀತಿಯಿದೆ.
ಮಣ್ಣಿನಡಿ ಕನಿಷ್ಠ 12 ಜನರು ಸಿಕ್ಕಿಬಿದ್ದಿರುವ ಶಂಕೆ ವ್ಯಕ್ತವಾಗಿದ್ದು. ಭಾರೀ ಮಳೆಯಿಂದಾಗಿ ಗೌರಿಕುಂಡ್ ಪೋಸ್ಟ್ ಬ್ರಿಡ್ಜ್ ಬಳಿ ಭೂಕುಸಿತ ಸಂಭವಿಸಿ ಅಂಗಡಿಗಳ ಮೇಲೆ ಬಿದ್ದಿದೆ ಎಂದು ಹೇಳಲಾಗಿದೆ. ಕಾಣೆಯಾದವರಿಗಾಗಿ ಶೋಧ ನಡೆಯುತ್ತಿದೆ ಎಂದು ರುದ್ರಪ್ರಯಾಗ್ ಎಸ್ಪಿ ಡಾ.ವಿಶಾಖಾ ತಿಳಿಸಿದ್ದಾರೆ.
ಇದನ್ನೂ ಓದಿ: ಪ್ರಯಾಣಿಕರನ್ನು ಹೊತ್ತು ದೆಹಲಿಗೆ ಹೊರಟಿದ್ದ ಇಂಡಿಗೋ ವಿಮಾನ ಪಾಟ್ನಾದಲ್ಲಿ ತುರ್ತು ಭೂಸ್ಪರ್ಶ