ಬಂಟ್ವಾಳ: ಕಾರ್ಮಿಕರು ಉಳಿದುಕೊಂಡ ಶೆಡ್ ಗೆ ಗುಡ್ಡ ಕುಸಿತದಿಂದ ಮಣ್ಣಿನಡಿ ಸಿಲುಕಿಕೊಂಡ ನಾಲ್ವರು ಕಾರ್ಮಿಕರ ಪೈಕಿ ಸಾವಿರ ಸಂಖ್ಯೆ ಮೂರಕ್ಕೆ ಏರಿದ್ದು, ಓರ್ವ ಕಾರ್ಮಿಕ ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಪಂಜಿಕಲ್ಲು ಗ್ರಾಮದ ಮುಕ್ಕುಡದಲ್ಲಿ ಬುಧವಾರ ಸಂಜೆ ಹೆನ್ರಿ ಕಾರ್ಲೊ ಅವರ ಮನೆಯ ಬಳಿಯ ಶೆಡ್ ನಲ್ಲಿ ಉಳಿದುಕೊಂಡು ರಬ್ಬರ್ ತೋಟಗಳಲ್ಲಿ ಕೆಲಸ ಮಾಡುತ್ತಿದ್ದ ಐವರ ಪೈಕಿ ನಾಲ್ವರು ಗುಡ್ಡ ಜರಿದು ಶೆಡ್ ನೊಳಗೆ ಸಿಲುಕಿಕೊಂಡಿದ್ದರು. ಅದರಲ್ಲಿ ಮೂವರನ್ನು ಜೆಸಿಬಿ ಮೂಲಕ ರಕ್ಷಣೆ ಮಾಡಿದ್ದು, ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದ. ರಕ್ಷಿಸಲ್ಪಟ್ಟ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಇದನ್ನೂ ಓದಿ:ಮುಂದುವರಿದ ಮಳೆ: ಶಿವಮೊಗ್ಗ ಜಿಲ್ಲೆಯ ಪ್ರಾಥಮಿಕ-ಪ್ರೌಢ ಶಾಲೆಗಳಿಗೆ ರಜೆ ಘೋಷಣೆ
ಆದರೆ ಇಬ್ಬರು ಕಾರ್ಮಿಕರು ಚಿಕಿತ್ಸೆ ಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ತಡರಾತ್ರಿ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಪಾಲಕ್ಕಾಡು ನಿವಾಸಿ ವಿಜು (45 ವ) ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರ ಸ್ಥಿತಿಯಲ್ಲಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದ ಕೊಟ್ಟಾಂ ನಿವಾಸಿ ಬಾಬು (46 ವ) ಹಾಗೂ ಸಂತೋಷ್ ಅಲಪುರ (45 ವ) ಮೃತಪಟ್ಟ ದುರ್ದೈವಿಗಳು.
ಕಣ್ಣೂರು ನಿವಾಸಿ ಜಾನಿ (44 ವ) ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರ್ಮಿಕರನ್ನು ನಿರಂತರ ಐದು ತಾಸುಗಳ ಕಾರ್ಯಾಚರಣೆಯ ಮೂಲಕ ಹೊರಗೆ ತೆಗೆಯಲಾಗಿತ್ತು.