ಕೊಲಂಬೊ: ಆರ್ಥಿಕ ಬಿಕ್ಕಟ್ಟಿನಿಂದ ಕಂಗೆಟ್ಟಿರುವ ದ್ವೀಪರಾಷ್ಟ್ರ ಶ್ರೀಲಂಕಾದಲ್ಲಿ ಕರ್ಫ್ಯೂ ನಡುವೆಯೇ ಪ್ರತಿಭಟನೆ, ಹಿಂಸಾಚಾರ ತೀವ್ರಗೊಂಡಿದೆ. ಮತ್ತೊಂದೆಡೆ ಮುಂಜಾಗ್ರತಾ ಕ್ರಮವಾಗಿ ಲಂಕಾದ ಮಾಜಿ ಪ್ರಧಾನಿ ಮಹೀಂದ ರಾಜಪಕ್ಸ ಮತ್ತು ಅವರ ಕುಟುಂಬ ಸದಸ್ಯರು ನೌಕಾನೆಲೆಗೆ ಪಲಾಯನಗೈದಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಮಲೆನಾಡಿನಲ್ಲಿ ಹೆಚ್ಚಾಯ್ತು ಕಾಡಾನೆ ಉಪಟಳ : ಆನೆ ತುಳಿತಕ್ಕೆ ಮತ್ತೋರ್ವ ಅಮಾಯಕ ಬಲಿ
ಶ್ರೀಲಂಕಾದಲ್ಲಿ ನಡೆದ ಹಿಂಸಾಚಾರ, ಗಲಭೆಯಲ್ಲಿ ಈವರೆಗೆ ಸಾವನ್ನಪ್ಪಿರುವವರ ಸಂಖ್ಯೆ 08ಕ್ಕೆ ಏರಿಕೆಯಾಗಿದೆ. ಮತ್ತೊಂದು ವರದಿ ಪ್ರಕಾರ, ಮುಂಜಾಗ್ರತಾ ಕ್ರಮವಾಗಿ ಮಾಜಿ ಪ್ರಧಾನಿ ರಾಜಪಕ್ಷ ಮತ್ತು ಕುಟುಂಬ ಸದಸ್ಯರನ್ನು ಹೆಲಿಕಾಪ್ಟರ್ ಮೂಲಕ ನೌಕಾನೆಲೆಗೆ ಕರೆದೊಯ್ಯಲಾಗಿದೆ ಎಂದು ಮೂಲಗಳು ಹೇಳಿವೆ.
ಹಿಂಸಾಚಾರದಲ್ಲಿ ಹಲವು ಮಂದಿ ಸಾವನ್ನಪ್ಪಿದ್ದ ನಂತರ ಕರ್ಫ್ಯೂ ಜಾರಿಗೊಳಿಸಿ, ಶ್ರೀಲಂಕಾದಾದ್ಯಂತ ಸಾವಿರಾರು ಪೊಲೀಸರು, ಭದ್ರತಾ ಪಡೆಯನ್ನು ನಿಯೋಜಿಸಲಾಗಿದೆ. ಸೋಮವಾರ ಪ್ರಧಾನಿ ಹುದ್ದೆಗೆ ಮಹೀಂದ ರಾಜಪಕ್ಸೆ ರಾಜೀನಾಮೆ ನೀಡುವ ಮೊದಲು ಸರ್ಕಾರದ ಪರ ಮತ್ತು ವಿರೋಧಿ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆ ತಾರಕ್ಕೇರಿತ್ತು.
ರಾಜಪಕ್ಸ ಸ್ಥಳಾಂತರಗೊಂಡಿರುವ ನೌಕಾ ನೆಲೆಯ ಸುತ್ತಲೂ ಪ್ರತಿಭನಾಕಾರರು ಸುತ್ತುವರಿದಿದ್ದು, ಕನಿಷ್ಠ ಹತ್ತಕ್ಕೂ ಅಧಿಕ ಪೆಟ್ರೋಲ್ ಬಾಂಬ್ ಎಸೆದಿರುವುದಾಗಿ ಹಿರಿಯ ಭದ್ರತಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.