Advertisement
ಕುಟುಂಬದ ವಾರ್ಷಿಕ ಆದಾಯ 2.50 ಲಕ್ಷಕ್ಕಿಂತ ಕಡಿಮೆ ಇರುವ ಎಲ್ಲ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ನೀಡುವುದಾಗಿ ಕಾಂಗ್ರೆಸ್ ಸರ್ಕಾರ ಘೋಷಣೆ ಮಾಡಿತ್ತು. ಅದರಂತೆ ಫೆ.27ರಂದು ವಿಧಾನಸೌಧದಲ್ಲಿ ಸಾಂಕೇತಿಕವಾಗಿ ಕೆಲವು ಕಾಲೇಜಿನ ವಿದ್ಯಾರ್ಥಿಗಳಿಗೆ ಒಂದೊಂದು ಹಂಚಿಕೆ ಮಾಡಲಾಗಿತ್ತು. ಇದಾದ ನಂತರ ಎಲ್ಲ ಕಾಲೇಜುಗಳಿಗೂ ಎರಡೆರಡು ಲ್ಯಾಪ್‌ಟಾಪ್ ಹಂಚಿಕೆ ಮಾಡಲಾಗಿತ್ತು. ಆದರೆ, ಆ ಎರಡೂ ಲ್ಯಾಪ್‌ಟಾಪ್‌ಗ್ಳನ್ನು ಕಾಲೇಜಿನಿಂದ ವಿದ್ಯಾರ್ಥಿಗಳಿಗೆ ಈವರೆಗೂ ವಿತರಣೆ ಮಾಡಿಲ್ಲ. ಈಗ ವಿತರಿಸುವಂತೆ ಇಲಾಖೆಯೇ ಪ್ರಾಂಶುಪಾಲರಿಗೆ ಸೂಚಿಸಿದೆ. 2017-18ನೇ ಸಾಲಿನಲ್ಲಿ ಪ್ರವೇಶ ಪಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ನಿಯಮಾನುಸಾರ ಈಗಾಗಲೇ ಲ್ಯಾಪ್‌ಟಾಪ್ ವಿತರಿಸಲಾಗಿದೆ. ಆದರೆ, ಎಸ್ಸಿ, ಎಸ್ಸಿ ವಿದ್ಯಾರ್ಥಿಗಳನ್ನು ಹೊರತುಪಡಿಸಿ, ಉಳಿದ ಸಮುದಾಯಗಳ ಅರ್ಹ ವಿದ್ಯಾರ್ಥಿಗಳಿಗೆ ಇನ್ನೂ ಲ್ಯಾಪ್‌ಟಾಪ್ ವಿತರಿಸಿಲ್ಲ.
Related Articles
Advertisement
ಆದರೆ, 60 ಸರ್ಕಾರಿ ಪದವಿ ಕಾಲೇಜುಗಳು ಮಾಹಿತಿಯನ್ನೆ ನೀಡಿಲ್ಲ. ಮಾಹಿತಿ ನೀಡಿದ 60 ಕಾಲೇಜುಗಳ ಪಟ್ಟಿಯಲ್ಲಿ ಬೆಂಗಳೂರಿನ ನಾಲ್ಕು ಕಾಲೇಜು, ಮೈಸೂರು, ಮಂಗಳೂರು, ಉಡುಪಿ, ರಾಮನಗರ, ತುಮಕೂರು, ಉತ್ತರ ಕನ್ನಡ,ಕಲಬುರಗಿ, ವಿಜಯಪುರ ಸೇರಿದಂತೆ ಬಹುತೇಕ ಜಿಲ್ಲೆಗಳ ಒಂದೆರಡು ಕಾಲೇಜುಗಳು ಸೇರಿವೆ. ಅ.22ರೊಳಗೆ ಮಾಹಿತಿ ಒದಗಿಸುವಂತೆ ಸಂಬಂಧ ಪಟ್ಟ ಕಾಲೇಜಿನ ಪ್ರಾಂಶುಪಾಲರಿಗೆ ಇಲಾಖೆ ಯಿಂದ ತಾಕೀತು ಮಾಡಲಾಗಿದೆ. ಇಲ್ಲವಾದರೆ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಲಾಗಿದೆ.