Advertisement

ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ವಿತರಣೆ

11:18 AM Jan 12, 2018 | Team Udayavani |

ಬೀದರ: ದಲಿತ, ಹಿಂದುಳಿದ ವಿದ್ಯಾರ್ಥಿಗಳು ಸಹ ಸ್ಪರ್ಧಾತ್ಮ ಯುಗದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನದ ಮಾಹಿತಿ ಪಡೆದು ಮುಂದೆ ಬರಲಿ ಎಂಬ ಉದ್ದೇಶದಿಂದ ಸರ್ಕಾರದಿಂದ ಉಚಿತ ಲ್ಯಾಪ್‌ಟಾಪ್‌ ನೀಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.

Advertisement

ನಗರದ ರಂಗ ಮಂದಿರದಲ್ಲಿ ಗುರುವಾರ ಜಿಲ್ಲಾಡಳಿತ ಮತ್ತು ಕಾಲೇಜು ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಿದ್ದ 2016-17ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಪದವಿ ಹಾಗೂ ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್‌ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. 

ವಿದ್ಯಾರ್ಥಿಗಳು ದೇಶದ ಆಸ್ತಿ ಮತ್ತು ಸಂಪತ್ತು. ನಮ್ಮಲ್ಲಿ ವಿದ್ಯಾರ್ಥಿಗಳು ಪ್ರತಿಭಾವಂತರು ಇರುವುದರಿಂದ ವಿದೇಶದ ವಿವಿಧ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.  ರ್ಧಾತ್ಮಕತೆ ಹೆಚ್ಚಾಗಿದ್ದು, ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣದಲ್ಲಿ ಅನೇಕ ವಿಷಯಗಳ ಮಾಹಿತಿಯನ್ನು ಕ್ಷಣಾರ್ಧದಲ್ಲಿ ಪಡೆಯಬಹುದು. ಇದರ ಉಪಯೋಗವನ್ನು ನಾವು ಒಳ್ಳೆಯದಾಗಿ ಬಳಸಿಕೊಂಡರೆ ಅನೇಕ ವಿಷಯಗಳಲ್ಲಿ ಪರಿಣತಿ ಹೊಂದಬಹುದು. ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ಜಿಲ್ಲೆಯ ಪ್ರಮುಖ ಸ್ಥಳಗಳಲ್ಲಿ ಉಚಿತ ವೈಫೈ ಸೌಲಭ್ಯ ಒದಗಿಸಲಾಗುತ್ತಿದೆ ಎಂದು ಹೇಳಿದರು.

ಶಾಸಕ ರಹೀಮ್‌ ಖಾನ್‌ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಹಲವಾರು ಕನಸು ಕಟ್ಟಿಕೊಂಡಿರುತ್ತಾರೆ. ಅದಕ್ಕೆ ತಕ್ಕ ಪರಿಶ್ರಮ ಪಡುವುದಾದರೆ ನಿಮ್ಮ ಕನಸು ನನಸಾಗುತ್ತದೆ. ನಮ್ಮ ಸರ್ಕಾರವು ಅನೇಕ ಸೌಲಭ್ಯಗಳನ್ನು ದಲಿತ ಹಿಂದುಳಿದ ವರ್ಗಗಳಿಗೆ ಕಲ್ಪಿಸಿಕೊಟ್ಟಿದೆ ಇದರ ಅವಕಾಶ ಪಡೆದುಕೊಳ್ಳಿ ಎಂದು ಕರೆ ನೀಡಿದರು. 

ಶಾಸಕ ರಾಜಶೇಖರ ಪಾಟೀಲ, ನಗರಸಭೆ ಅಧ್ಯಕ್ಷೆ ಶಾಲಿನಿ ಚಿಂತಾಮಣಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಂಜಯ ಜಾಗೀರದಾರ ಸೇರಿದಂತೆ ಅಧಿಕಾರಿಗಳು, ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರು ಪಾಲ್ಗೊಂಡಿದ್ದರು. ವೈಶಾಲಿ ಪ್ರಾರ್ಥಿಸಿದರು ಗಡ್ಡೆ ಸ್ವಾಗತಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next