Advertisement

ಧರ್ಮಸ್ಥಳ ಸಂಸ್ಥೆ ಕಾರ್ಯ ಸ್ತುತ್ಯರ್ಹ: ತಿಪ್ಪಾರೆಡ್ಡಿ

07:19 PM Nov 10, 2020 | Suhan S |

ಚಿತ್ರದುರ್ಗ: ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಟ್ಯಾಬ್‌ ಹಾಗೂ ಲ್ಯಾಪ್‌ಟಾಪ್‌ ವಿತರಿಸುತ್ತಿರುವುದು ಶ್ಲಾಘನೀಯ ಎಂದು ಎಂದು ಶಾಸಕ ಜಿ.ಎಚ್‌. ತಿಪ್ಪಾರೆಡ್ಡಿ ಹೇಳಿದರು.

Advertisement

ಸೀಬಾರ ಬಳಿ ಇರುವ ಎಸ್‌. ನಿಜಲಿಂಗಪ್ಪ ಸ್ಮಾರಕದ ಬಳಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸೋಮವಾರ ಜ್ಞಾನತಾಣ ಯೋಜನೆಯಡಿ ಟ್ಯಾಬ್‌ ಹಾಗೂ ಲ್ಯಾಪ್‌ಟಾಪ್‌ ವಿತರಿಸಿ ಅವರು ಮಾತನಾಡಿದರು. ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಸಮಾಜದಲ್ಲಿ ಅನೇಕ ಸುಧಾರಣೆಗಳನ್ನು ತರುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಬಡವರಿಗಾಗಿ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಶಿಕ್ಷಣ ಹಾಗೂ ಮೂಲ ಸೌಲಭ್ಯಗಳಿಗೆ ಹೆಚ್ಚಿನ ಮಹತ್ವ ನೀಡುತ್ತಿದ್ದಾರೆ ಎಂದರು.

ಮಹಿಳೆಯರು ಸ್ವಉದ್ಯೋಗ ಕಂಡುಕೊಂಡುಸ್ವಾವಲಂಬಿಗಳಾಗಿ ಬಾಳಲು ಸ್ವಸಹಾಯ ಸಂಘಗಳಿಂದಸಾಲ ವಿತರಣೆ ಹಾಗೂ ಮದ್ಯವ್ಯಸನಿಗಳನ್ನು ದುಶ್ಚಟದಿಂದ ಹೊರತರಲು ಧರ್ಮಸ್ಥಳ ಸಂಸ್ಥೆ ಸದಾ ಶ್ರಮಿಸುತ್ತಿದೆ. ಕೋವಿಡ್‌-19 ಸಂಕಷ್ಟದ ಪರಿಸ್ಥಿತಿಯಲ್ಲಿ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ದೃಷ್ಟಿಯಿಂದ ಗ್ರಾಮೀಣ ಭಾಗದ ಮಕ್ಕಳಿಗೆ ಅಂತರ್ಜಾಲ ಶಿಕ್ಷಣದ ಮಹತ್ವವನ್ನು ತಿಳಿಸಲು ಜ್ಞಾನತಾಣ ಕಾರ್ಯಕ್ರಮ ಪ್ರಯೋಜನಕಾರಿ ಆಗಲಿದೆ. ಇಪ್ಪತ್ತು ಸಾವಿರ ಟ್ಯಾಬ್‌, ಹತ್ತು ಸಾವಿರ ಲ್ಯಾಪ್‌ಟಾಪ್‌ಗ್ಳನ್ನು ವಿದ್ಯಾರ್ಥಿಗಳಿಗೆ ವಿತರಿಸುತ್ತಿರುವುದು ಪುಣ್ಯದ ಕೆಲಸ ಎಂದು ಪ್ರಶಂಸೆ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಎಂ.ದಿನೇಶ್‌, ಕ್ಷೇತ್ರ ಶಿಕ್ಷಣಾಧಿ ಕಾರಿ ಸಿದ್ದಪ್ಪ, ಜನಜಾಗೃತಿ ವೇದಿಕೆ ಸದಸ್ಯ ಕೆ.ಆರ್‌. ಮಂಜುನಾಥ್‌, ರೂಪಾ ಜನಾರ್ದನ, ಚಿತ್ರದುರ್ಗ ತಾಲೂಕು ಯೋಜನಾ ಧಿಕಾರಿ ಉಮೇಶ್‌, ಸಿರಿಗೆರೆ ಯೋಜನಾಧಿಕಾರಿ ಪ್ರವೀಣ್‌, ವಲಯ ಮೇಲ್ವಿಚಾರಕರು, ವಿದ್ಯಾರ್ಥಿಗಳ ಪೋಷಕರು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next