Advertisement

ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌

10:03 AM Jun 23, 2017 | Team Udayavani |

ಬೆಂಗಳೂರು: ರಾಜ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜು, ಪಾಲಿಟೆಕ್ನಿಕ್‌ ಮತ್ತು ಇಂಜಿನಿಯರಿಂಗ್‌ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್‌ ವಿತರಿಸಲು ಸರಕಾರ ಅನುಮೋದನೆ ನೀಡಿದೆ. ವಾರ್ಷಿಕ 2.5 ಲಕ್ಷ ರೂ.ಗಿಂತ ಕಡಿಮೆ ಆದಾಯ ಇರುವ ವಿದ್ಯಾರ್ಥಿಗಳಿಗೆ ಈ ಲ್ಯಾಪ್‌ಟಾಪ್‌ ಲಭ್ಯವಾಗಲಿದ್ದು, ಅದಕ್ಕಾಗಿ ಪ್ರಥಮ ದರ್ಜೆ ಕಾಲೇಜುಗಳ 27,500 ಹಾಗೂ ಸರಕಾರಿ ಪಾಲಿಟೆಕ್ನಿಕ್‌, ಎಂಜಿನಿಯರಿಂಗ್‌ ಕಾಲೇಜುಗಳ 9,726 ವಿದ್ಯಾರ್ಥಿಗಳನ್ನು ಗುರುತಿಸಲಾಗಿದೆ. 2016-17ನೇ ಸಾಲಿನ ಆಯವ್ಯಯದಲ್ಲಿ ಈ ಕುರಿತು ಘೋಷಣೆ ಮಾಡಲಾಗಿತ್ತಾದರೂ ಅದು ಕಾರ್ಯರೂಪಕ್ಕೆ ಬಂದಿರಲಿಲ್ಲ.

Advertisement
Advertisement

Udayavani is now on Telegram. Click here to join our channel and stay updated with the latest news.

Next