ಜಮ್ಮು: ಕಳೆದ 7 ದಿನಗಳಿಂದ ಅನಂತನಾಗ್ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸುತ್ತಿರುವ ಶೋಧ ಕಾರ್ಯಾಚರಣೆಯಲ್ಲಿ ಲಷ್ಕರ್-ಎ-ತೊಯ್ಬಾ ಕಮಾಂಡರ್ ಉಝೈರ್ ಖಾನ್ ನನ್ನು ಎನ್‌ಕೌಂಟರ್ ಮಾಡಲಾಗಿದೆ ಎಂದು ಭದ್ರತಾ ಪಡೆಯ ಅಧಿಕಾರಿಗಳು ಮಾಹಿತಿ ಬಹಿರಂಗಪಡಿಸಿದ್ದಾರೆ.
ಖಚಿತ ಮಾಹಿತಿಯ ಮೇರೆಗೆ ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಕೊಕೆರೆ ನಾಗ್ ನಲ್ಲಿ ಕಾರ್ಯಾಚರಣೆಗೆ ಇಳಿದಂತ ಭಾರತೀಯ ಸೇನಾಪಡೆ, ಕೆಲ ಕಾಲ ಉಗ್ರನೊಂದಿಗೆ ಗುಂಡಿನ ಚಕಮಕಿ ನಡೆಸಿದರು. ಅಂತಿಮವಾಗಿ ಲಷ್ಕರ್ ಉಗ್ರ ಉಜೈರ್ ಖಾನ್ ಅನ್ನು ಎನ್ ಕೌಂಟರ್ ಮಾಡಿ ಹತ್ಯೆಗೈದಿದ್ದಾರೆ.
ಇದರೊಂದಿಗೆ ಏಳು ದಿನಗಳಿಂದ ನಡೆಸುತ್ತಿದ್ದ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಯಿತು ಎಂದ್ದಿದ್ದಾರೆ.
ಹತ್ಯೆಗೀಡಾದ ಉಗ್ರನಿಂದ ಆಯುಧವನ್ನು ವಶಪಡಿಸಿಕೊಂಡಿದ್ದಾರೆ ಮತ್ತು ಇನ್ನೊಬ್ಬ ವ್ಯಕ್ತಿಯ ದೇಹವನ್ನು ವಶಪಡಿಸಿಕೊಂಡಿದ್ದಾರೆ ಎಂದು ಎಡಿಜಿಪಿ ಪೊಲೀಸ್ ವಿಜಯ್ ಕುಮಾರ್ ತಿಳಿಸಿದ್ದಾರೆ. ಉಝೈರ್ ಖಾನ್ ಹತ್ಯೆಯೊಂದಿಗೆ ಏಳು ದಿನಗಳ ಸುದೀರ್ಘ ಎನ್‌ಕೌಂಟರ್ ಮುಕ್ತಾಯಗೊಂಡಿದೆ ಎಂದು ಅಧಿಕಾರಿ ಘೋಷಿಸಿದ್ದಾರೆ.
ಇದನ್ನೂ ಓದಿ: Samvidhan Sadan: ಹಳೆ ಸಂಸತ್ ಕಟ್ಟಡಕ್ಕೆ ಹೊಸ ಹೆಸರು ಬಹಿರಂಗಪಡಿಸಿದ ಪ್ರಧಾನಿ