Advertisement

ಜಮ್ಮು-ಕಾಶ್ಮೀರ: ಬಿಡುಗಡೆಯಾಗಿದ್ದ ಉಗ್ರ ತಬರಾಕ್‌ ಹುಸೈನ್‌ ಮತ್ತೆ ಬಂಧನ

09:42 PM Aug 21, 2022 | Team Udayavani |

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಎಲ್‌ಒಸಿಯಲ್ಲಿ ಉಗ್ರ ಸಂಘಟನೆ ಲಷ್ಕರ್‌-ಎ-ತೊಯ್ಬಾ ಸಂಘಟನೆಯ ತಬರಾಕ್‌ ಹುಸೈನ್‌ (32) ಎಂಬ ಉಗ್ರನನ್ನು ಬಂಧಿಸಲಾಗಿದೆ. ಆತ ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ನಿವಾಸಿಯಾಗಿದ್ದಾನೆ.

Advertisement

ಪಾಕಿಸ್ತಾನ ಸೇನೆಯ ಗುಪ್ತಚರ ವಿಭಾಗದಲ್ಲಿಯೂ ಆತ ಕೆಲಸ ಮಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಅವರು ನೀಡಿದ ಮಾಹಿತಿ ಪ್ರಕಾರ ಹುಸೈನ್‌ ಮತ್ತು ಆತನ ಸಹೋದರ 26 ತಿಂಗಳ ಕಾಲ ಜೈಲು ಶಿಕ್ಷೆಗೆ ಗುರಿಯಾಗಿದ್ದರೆಂದೂ ಮಾಹಿತಿ ನೀಡಿದ್ದಾರೆ.

ನಂತರ ಆತನನ್ನು ಅಟ್ಟಾರಿ ಗಡಿ ಮೂಲಕ ಪಾಕಿಸ್ತಾನಕ್ಕೆ ಕಳುಹಿಸಿಕೊಡಲಾಗಿತ್ತು. ಬಂಧಿತ ಉಗ್ರ ಹಲವು ಸ್ಥಳಗಳಲ್ಲಿ ಆತ್ಮಹತ್ಯಾ ದಾಳಿ ನಡೆಸುವ ಬಗ್ಗೆ ಸಂಚು ರೂಪಿಸಿಕೊಂಡಿದ್ದ ಎಂದು ಹೇಳಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next