Advertisement

ಕುಪ್ವಾರಾದಲ್ಲಿ ಲಷ್ಕರ್‌ -ಇ-ತೋಯ್ಬಾ ಉಗ್ರ ಅರೆಸ್ಟ್‌ 

11:59 AM Nov 25, 2017 | Team Udayavani |

ಶ್ರೀನಗರ: ಭದ್ರತಾ ಪಡೆಗಳು ಕುಪ್ವಾರದ ದಟ್ಟಾರಣ್ಯದಲ್ಲಿ ಶುಕ್ರವಾರ ನಡೆಸಿದ ಕಾರ್ಯಾಚರಣೆಯಲ್ಲಿ ಲಷ್ಕರ್‌ -ಇ-ತೋಯ್ಬಾ ಉಗ್ರ ಸಂಘಟನೆಗೆ ಸೇರಿದ ಓರ್ವ ಉಗ್ರನನ್ನು ವಶಕ್ಕೆ ಪಡೆಯಲಾಗಿದೆ.

Advertisement

ಮುಗಾಮ್‌ ಪ್ರಾಂತ್ಯದಲ್ಲಿ ಶೋಧ ಕಾರ್ಯಾಚರಣೆ ವೇಳೆ ಉಗ್ರನ್ನು ವಶಕ್ಕೆ ಪಡೆಯಲಾಗಿದ್ದು, ಬಂಧಿತ ಉಗ್ರ ಪಾಕ್‌ ಮೂಲದವ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.

ಆತನ ಗುರುತು ಇನ್ನಷ್ಟೇ ಪತ್ತೆಯಾಗಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದೇ ಪ್ರದೇಶದಲ್ಲಿ ಮಂಗಳವಾರ ನಡೆದ ಕಾರ್ಯಾಚರಣೆಯಲ್ಲಿ ಮೂವರು ಉಗ್ರರನ್ನು ಹತ್ಯೆಗೈಯಲಾಗಿತ್ತು. 

Advertisement

Udayavani is now on Telegram. Click here to join our channel and stay updated with the latest news.

Next