Advertisement

ಲಷ್ಕರ್‌ ಕಮಾಂಡರ್‌ ಅಬು ದುಜಾನಾ ಫಿನಿಷ್‌; ಹೊತ್ತಿ ಉರಿದ ಕಾಶ್ಮೀರ

09:30 AM Aug 01, 2017 | |

ಪುಲ್ವಾಮಾ: ಪುಲ್ವಮಾದ ಹರ್ಕಿಮಾದಲ್ಲಿ ಸೇನಾಪಡೆಗಳು ಮತ್ತು ಪೊಲೀಸರು ಮಂಗಳವಾರ ಜಂಟಿ ಕಾರ್ಯಾಚರಣೆ ನಡೆಸಿ ಲಷ್ಕರ್‌ -ಇ-ತೋಯ್ಬಾ ಉಗ್ರ ಸಂಘಟನೆಯ ಕಮಾಂಡರ್‌ ಅಬು ದುಜಾನಾ ಸೇರಿದಂತೆ ಇಬ್ಬರು ಉಗ್ರರನ್ನು ಹತ್ಯೆಗೈದಿವೆ.ಘಟನೆಯ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು ವ್ಯಾಪಕ ಹಿಂಸಾಚಾರಗಳು ನಡೆದಿವೆ. 

Advertisement

ಉಗ್ರರ ಅಡಗುದಾಣದ ಮೇಲೆ ಜಂಟಿ ಕಾರ್ಯಾಚರಣೆಗಿಳಿದ ಭದ್ರತಾ ಪಡೆಗಳು ಗುಂಡಿನ ಚಕಮಕಿ ನಡೆಸಿ ಮೋಸ್ಟ್‌ ವಾಂಟೆಡ್‌ ಆಗಿದ್ದ ಉಗ್ರ ದುಜಾನಾ ಸೇರಿ ಇಬ್ಬರನ್ನು ಹತ್ಯೆಗೈದಿದ್ದಾರೆ. ಈ ವೇಳೆ ಕಾರ್ಯಾಚರಣೆ ವಿರೋಧಿಸಿ ಸ್ಥಳೀಯ 100 ಕ್ಕೂ ಹೆಚ್ಚು ಜನರು ಭದ್ರತಾ ಪಡೆಗಳತ್ತ ಕಲ್ಲು ತೂರಾಟ ನಡೆಸಿದ್ದಾರೆ. ಈ ವೇಳೆ ಪೊಲೀಸ್‌ ಫೈರಿಂಗ್‌ ನಡೆಸಿದ್ದು ಓರ್ವ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ. 

ಸ್ಥಳದಲ್ಲಿ ಇನ್ನು ಕೆಲ ಉಗ್ರರು ಇರುವ ಸಾಧ್ಯತೆಗಳಿರುವ ಹಿನ್ನಲೆಯಲ್ಲಿ ಕಾರ್ಯಾಚರಣೆ ಮುಂದುವರೆದಿದೆ. 

ಅಲ್ಲಲ್ಲಿ ಕಲ್ಲು ತೂರಾಟ ಪ್ರಕಣಗಳು ವರದಿಯಾಗಿದ್ದು, ಶ್ರೀನಗರದಲ್ಲೂ ಉದ್ರಿಕ್ತಯುವಕರು ಹಿಂಸಾ ರೂಪದ ಪ್ರತಿಭಟನೆ ನಡೆಸಿದ್ದಾರೆ. 

ಮುಂಜಾಗೃತಾ ಕ್ರಮವಾಗಿ ರಾಜ್ಯಾದ್ಯಂತ ಇಂಟರ್ನೆಟ್‌ ಸೇವೆ ಸ್ಥಗಿತಗೊಳಿಸಲಾಗಿದ್ದು, ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. 

Advertisement

ಆಯಕಟ್ಟಿನ ಸ್ಥಳಗಳಲ್ಲಿ ವ್ಯಾಪಕ ಭದ್ರತೆ ಕೈಗೊಳ್ಳಲಾಗಿದೆ. ಹಿಂಸಾಚಾರಕ್ಕಿಳಿದ ಉದ್ರಿಕ್ತರನ್ನು ನಿಯಂತ್ರಿಸಲು ಭದ್ರತಾ ಪಡೆಗಳು ಹರಸಾಹಸ ಪಡುತ್ತಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next