Advertisement

ಯೇಸು ಕ್ರಿಸ್ತರ ಕೊನೆಯ ಭೋಜನ ದಿನದ ಸ್ಮರಣೆ

09:10 AM Mar 30, 2018 | Team Udayavani |

ಮಂಗಳೂರು/ಉಡುಪಿ: ಕ್ರೈಸ್ತರು ಗುರುವಾರ ಯೇಸು ಕ್ರಿಸ್ತರ ಕೊನೆಯ ಭೋಜನದ ದಿನವನ್ನು ಆಚರಿಸಿದರು. ಆ ಪ್ರಯುಕ್ತ ಚರ್ಚ್‌ಗಳಲ್ಲಿ ಮತ್ತು ಇತರ ಕ್ರೈಸ್ತ ಪ್ರಾರ್ಥನಾ ಮಂದಿರಗಳಲ್ಲಿ ಗುರುವಾರ ಸಂಜೆ ವಿಶೇಷ ಪ್ರಾರ್ಥನೆಗಳು ಜರಗಿದವು. ಮಂಗಳೂರಿನ ರೊಜಾರಿಯೋ ಕೆಥೆಡ್ರಲ್‌ನಲ್ಲಿ ಬಿಷಪ್‌ ರೈ| ರೆ| ಡಾ| ಅಲೋಶಿಯಸ್‌ ಪಾವ್ಲ್ ಡಿ’ಸೋಜಾ ಮತ್ತು ಕಲ್ಯಾಣಪುರ ಮಿಲಾಗ್ರಿಸ್‌ ಕೆಥೆಡ್ರಲ್‌ನಲ್ಲಿ ಬಿಷಪ್‌ ರೈ| ರೆ| ಡಾ| ಜೆರಾಲ್ಡ್‌ ಐಸಾಕ್‌ ಲೋಬೋ ಅವರು ಬಲಿ ಪೂಜೆ ಮತ್ತು ಇತರ ಕಾರ್ಯಕ್ರಮಗಳ ನೇತೃತ್ವ ವಹಿಸಿ ಪ್ರವಚನ ನೀಡಿದರು. ಕೆಥೆಡ್ರಲ್‌ನ ರೆಕ್ಟರ್‌ ವಂ| ಜೆ.ಬಿ. ಕ್ರಾಸ್ತಾ ಮತ್ತು ವಂ| ಸ್ಟ್ಯಾನಿ ಬಿ. ಲೋಬೋ, ಇತರ ಧರ್ಮಗುರುಗಳು ಉಪಸ್ಥಿತರಿದ್ದರು.

Advertisement

ಯೇಸು ಕ್ರಿಸ್ತರು ತಮ್ಮ ಕೊನೆಯ ಭೋಜನದ ಸಂದರ್ಭದಲ್ಲಿ 12 ಮಂದಿ ಶಿಷ್ಯರ ಪಾದ ತೊಳೆದು ಸೇವೆಯ ಸಂಸ್ಕಾರವನ್ನು ಪ್ರತಿಪಾದಿಸಿದ್ದು, ಅದರ ಸಂಕೇತವಾಗಿ ಕೆಥೆಡ್ರಲ್‌ನಲ್ಲಿ ಬಿಷಪರು ಹಾಗೂ ಇತರ ಚರ್ಚ್‌ಗಳಲ್ಲಿ ಸœಳೀಯ ಧರ್ಮಗುರುಗಳು 12 ಜನ ಕ್ರೈಸ್ತರ ಪಾದಗಳನ್ನು ತೊಳೆದರು.

ಮಂಗಳೂರಿನಲ್ಲಿ 6 ಮಂದಿ ಪುರುಷರು ಮತ್ತು 6 ಮಂದಿ ಮಹಿಳೆಯರು, ಉಡುಪಿಯಲ್ಲಿ ನಾಲ್ವರು ಮಹಿಳೆಯರು, ಓರ್ವ ಕನ್ಯಾಸ್ತ್ರೀ, ಉಳಿದವರು ಪುರುಷರಿದ್ದರು. ಮಹಿಳೆಯರಿಗೂ ಸಮಾನ ಪ್ರಾತಿನಿಧ್ಯ ನೀಡಬೇಕೆಂದು ಮೂರು ವರ್ಷಗಳ ಹಿಂದೆ ಪೋಪ್‌ ಫ್ರಾನ್ಸಿಸ್‌ ಅವರು ಆದೇಶ ನೀಡಿದ್ದು, ಈ ಹಿನ್ನೆಲೆಯಲ್ಲಿ ಕಳೆದ ಮೂರು ವರ್ಷಗಳಿಂದ ಈ ಪ್ರಕ್ರಿಯೆ ಮುಂದುವರಿದಿದೆ. ಮಹಿಳೆಯರಿಗೆ ಸ್ಥಾನಮಾನ ಕಲ್ಪಿಸುವಾಗ ಯುವಜನರಿಗೆ, ವಯಸ್ಕರಿಗೆ, ರೋಗಿಗಳಿಗೆ ಹಾಗೂ ಧಾರ್ಮಿಕ ವ್ಯಕ್ತಿಗಳಿಗೂ ಪ್ರಾತಿನಿಧ್ಯ ನೀಡಲಾಗಿದ್ದು, ಅದರಂತೆ ಇಬ್ಬರು ಧರ್ಮ ಭಗಿನಿಯರೂ ಭಾಗವಹಿಸಿದ್ದರು. ಕೊನೆಯ ಭೋಜನದ ಸಂದರ್ಭದಲ್ಲಿಯೇ ಯೇಸು ಕ್ರಿಸ್ತರು ಪರಮ ಪ್ರಸಾದದ ಸಂಸ್ಕಾರವನ್ನು ಹಾಗೂ ಧರ್ಮಗುರುಗಳ ದೀಕ್ಷಾ ಸಂಸ್ಕಾರವನ್ನೂ ಪ್ರಾರಂಭಿಸಿದ್ದ ಕಾರಣ ಈ ಎರಡು ಸಂಸ್ಕಾರಗಳ ಸ್ಮರಣೆಯನ್ನೂ ಮಾಡಲಾಯಿತು.


ಮಿಲಾಗ್ರಿಸ್‌ ಕೆಥೆಡ್ರಲ್‌ನಲ್ಲಿ ಬಿಷಪ್‌ ಜೆರಾಲ್ಡ್‌ ಐಸಾಕ್‌ ಲೋಬೋ ಅವರು 12 ಕ್ರೈಸ್ತರ ಪಾದಗಳನ್ನು ತೊಳೆದರು.

ಬಿಷಪ್‌ ತಮ್ಮ ಪ್ರವಚನದಲ್ಲಿ ಯೇಸು ಕ್ರಿಸ್ತರು ತಮ್ಮ ಕೊನೆ ಭೋಜನದ ಸಂದರ್ಭದಲ್ಲಿ ತಮ್ಮನ್ನು ಸೇವೆಗಾಗಿ ಸಂಪೂರ್ಣವಾಗಿ ಸಮರ್ಪಿಸಿದ್ದರು. ಅದನ್ನೇ ಇಂದು ಧರ್ಮಗುರುಗಳು ಮುಂದುವರಿಸಿಕೊಂಡು ಬರುತ್ತಿದ್ದಾರೆ ಎಂದರು. ಕಳೆದ ನಾಲ್ಕು ವಾರಗಳಿಂದ ವ್ರತಾಚರಣೆಯ ದಿನಗಳಲ್ಲಿ ಕ್ರೈಸ್ತರು ಸತ್ಕರ್ಮಗಳನ್ನು ಆಚರಿಸಿಕೊಂಡು ಬಂದಿರುವುದನ್ನು ಶ್ಲಾಘಿಸಿದ ಅವರು ಇದನ್ನು ಮುಂದುವರಿಸಿಕೊಂಡು ಹೋಗಬೇಕೆಂದರು. 

Advertisement
Advertisement

Udayavani is now on Telegram. Click here to join our channel and stay updated with the latest news.

Next