Advertisement

ಲತಾ ಮಂಗೇಶ್ಕರ್‌ ಚೇತರಿಕೆ

11:25 AM Nov 14, 2019 | Hari Prasad |

ಮುಂಬಯಿ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಹಿರಿಯ ಗಾಯಕಿ ಲತಾ ಮಂಗೇಶ್ಕರ್‌ (90) ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಆದರೆ ಅವರ ಪರಿಸ್ಥಿತಿ ಗಂಭೀರವಾಗಿಯೇ ಇದೆ ಎಂದು ಬ್ರೀಚ್‌ ಕ್ಯಾಂಡಿ ಆಸ್ಪತ್ರೆ ಮೂಲಗಳು ತಿಳಿಸಿವೆ.

Advertisement

ಅವರನ್ನು ಈಗಲೂ ತೀವ್ರ ನಿಗಾ ಘಟಕದಲ್ಲಿ ಕೃತಕ ಉಸಿರಾಟದ ವ್ಯವಸ್ಥೆಯಲ್ಲೇ ಇರಿಸಲಾಗಿದೆ. ಅವರು ಸಂಪೂರ್ಣವಾಗಿ ಚೇತರಿಸಿಕೊಳ್ಳಲು ಸಮಯ ಹಿಡಿಯುತ್ತದೆ ಎಂದಿದ್ದಾರೆ ವೈದ್ಯರು. ಇದೇ ವೇಳೆ ಮಹಾರಾಷ್ಟ್ರ ರಾಜ್ಯಪಾಲ ಭಗತ್‌ ಸಿಂಗ್‌ ಕೋಶ್ಯಾರಿ ಹಿರಿಯ ಗಾಯಕಿ ಶೀಘ್ರವೇ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next