Advertisement
ಪ್ರಶ್ನೆ ಪತ್ರಿಕೆ ಲೀಕ್ ತಡೆಗಟ್ಟಲು ಹಾಗೂ ಪರೀಕ್ಷೆಯನ್ನ ಪಾರದರ್ಶಕವಾಗಿ ನಡೆಸುವ ನಿಟ್ಟಿನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷಾ ಮಂಡಳಿ ಈ ಕಟ್ಟು ನಿಟ್ಟಿನ ಕ್ರಮ ಕೈಗೊಂಡಿರುವುದಾಗಿ ವರದಿ ತಿಳಿಸಿದೆ.
ಎಸ್ಸೆಎಸ್ಸೆಲ್ಸಿ ಪರೀಕ್ಷೆ ಬೆಳಗ್ಗೆ 9.30ಕ್ಕೆ. ಬೆಳಗ್ಗೆ 9.15 ರಿಂದ 9.30ರೊಳಗೆ ಪರೀಕ್ಷಾ ಕೇಂದ್ರಕ್ಕೆ ವಿದ್ಯಾರ್ಥಿಗಳು ಹಾಜರಾಗೋದು ಕಡ್ಡಾಯ. ಬೆಳಗ್ಗೆ 9.15ಕ್ಕೆ ಮೊದಲ ಲಾಂಗ್ ಬೆಲ್ ಹೊಡೆಯಲಿದ್ದು ಪರೀಕ್ಷಾ ಕೊಠಡಿಗೆ ವಿದ್ಯಾರ್ಥಿಗಳು ಹಾಜರಾಗಬೇಕು. ಬೆಳಗ್ಗೆ 9.25ಕ್ಕೆ ಎರಡನೇ ಲಾಂಗ್ ಬೆಲ್ ಆದಾಗ ಮುಖ್ಯ ಅಧೀಕ್ಷಕರಿಂದ ಕೊಠಡಿ ಮೇಲ್ವೀಚಾರಕರ ಕೈಗೆ ಪ್ರಶ್ನೆ ಪತ್ರಿಕೆ ನೀಡಲಾಗುತ್ತದೆ. 9.30ಕ್ಕೆ ಮೂರನೇ ಲಾಂಗ್ ಬೆಲ್ ಆದಾಗ ವಿದ್ಯಾರ್ಥಿಗಳಿಗೆ ಪ್ರಶ್ನೆ ಪತ್ರಿಕೆ ವಿತರಣೆ ಮಾಡಲಾಗುತ್ತದೆ. 9.30ರ ನಂತರ ತಡವಾಗಿ ಬರುವ ವಿದ್ಯಾರ್ಥಿಗಳಿಗೆ ಪ್ರವೇಶವಿಲ್ಲ. ಈ ಬಗ್ಗೆ ಎಸ್‍ಎಸ್‍ಎಲ್‍ಸಿ ಬೋರ್ಡ್, ಡಿಡಿಪಿಐಗಳು ಹಾಗೂ ಬಿಇಓಗಳ ಮೂಲಕ ಎಲ್ಲ ಶಾಲೆಗಳಿಗೆ ಸುತ್ತೋಲೆ ಕಳಿಸಿದೆ.