ಹೊಸದಿಲ್ಲಿ: ಹಿರಿಯ ಬಿಜೆಪಿ ನಾಯಕರು ಬುಧವಾರ ತಡರಾತ್ರಿ ಸಭೆ ಸೇರಿದ್ದು, ಮುಂಬರುವ ಲೋಕಸಭಾ ಚುನಾವಣೆಯ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ವರದಿಯಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ನಿವಾಸದಲ್ಲಿ ನಡೆದ ಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸೇರಿ ಹಲವು ಹಿರಿಯ ನಾಯಕರು ಉಪಸ್ಥಿತರಿದ್ದರು.
ಪ್ರಧಾನಿ ಮೋದಿ ಅವರು ಅಮೆರಿಕ- ಈಜಿಪ್ಟ್ ಪ್ರವಾಸದಿಂದ ಮರಳಿದ ಕೆಲವೇ ದಿನಗಳಲ್ಲಿ ಈ ಸಭೆ ನಡೆದಿದೆ.
ಇದನ್ನೂ ಓದಿ:ಲಕ್ನೋ: ಮಗುವಿನ ಮೈಗೆ ಕುದಿವ ಹಾಲಿನ ನೊರೆ ಲೇಪಿಸಿದ ಅರ್ಚಕ…
ಕೆಲ ದಿನಗಳ ಹಿಂದೆ ಮಧ್ಯಪ್ರದೇಶದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ್ದ ಪ್ರಧಾನಿ ಮೋದಿ ಅವರು, ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿ ಮಾಡುವ ಸುಳಿವು ನೀಡಿದ್ದರು. ದೇಶವು ಎರಡು ಕಾನೂನುಗಳ ಅಡಿಯಲ್ಲಿ ನಡೆಸಲು ಸಾಧ್ಯವಿಲ್ಲ ಎಂದಿದ್ದರು.
ಮೋದಿ ನಿವಾಸದಲ್ಲಿ ನಡೆದ ಸಭೆಯಲ್ಲಿ 2024ರ ಲೋಕಸಭಾ ಚುನಾವಣೆಯ ಕಾರ್ಯತಂತ್ರದ ಬಗ್ಗೆ ಚರ್ಚಿಸಲಾಗಿದೆ ಎಂದು ವರದಿ ತಿಳಿಸಿದೆ.