Advertisement

ರಾಜ್ಯಕ್ಕೆ ಮುಂಗಾರು ಪ್ರವೇಶ ತಡ

10:45 PM Jun 04, 2019 | Lakshmi GovindaRaj |

ಬೆಂಗಳೂರು: ರಾಜ್ಯಕ್ಕೆ ಮುಂಗಾರು ಪ್ರವೇಶ ಎರಡು ದಿನ ತಡವಾಗುವ ಸಾಧ್ಯತೆಯಿದ್ದು, ಇನ್ನು ಎರಡು ದಿನ ಒಳನಾಡಿನ ಕೆಲವೆಡೆ ಮುಂಗಾರು ಪೂರ್ವ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ರಾಜ್ಯ ಪ್ರಕೃತಿ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ.

Advertisement

ಉತ್ತರ ಒಳನಾಡಿನಲ್ಲಿ ಉಂಟಾಗಿರುವ ಟ್ರಫ್ನಿಂದಾಗಿ ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿರುವ ಕೆಲವು ಭಾಗಗಳಲ್ಲಿ ಮಳೆ ಮುಂದುವರಿದಿದ್ದು, ಮುಂದಿನ ಎರಡು ದಿನ ಒಳನಾಡಿನ ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಉಳಿದಂತೆ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಮುನ್ಸೂಚನೆ ನೀಡಿದೆ. ಮುಂಗಾರು ಕೇರಳ ಪ್ರವೇಶಿಸುವುದು ಒಂದು ದಿನ ತಡವಾಗುವ ಸಾಧ್ಯತೆಯಿದ್ದು, ಕೇರಳಕ್ಕೆ ಬಂದ ಎರಡು ದಿನಗಳ ನಂತರ ರಾಜ್ಯ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಕೇಂದ್ರದ ವಿಜ್ಞಾನಿ ಸುನೀಲ್‌ ಗವಾಸ್ಕರ್‌ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next