Advertisement

19ಕ್ಕೆ ಅಂತರ್ಜಲ ಯೋಜನೆಗೆ ಚಾಲನೆ

07:29 AM May 15, 2020 | Lakshmi GovindaRaj |

ಚಿಕ್ಕಬಳ್ಳಾಪುರ: ಪಂಚಾಯತ್‌ ರಾಜ್‌ ಮತ್ತು ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್‌.ಈಶ್ವರಪ್ಪ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್‌ ಚಿಕ್ಕಬಳ್ಳಾಪುರ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಮೇ 19  ರಂದು ಅಂತರ್ಜಲ ಚೇತನ ಯೋಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ ಎಂದು ಜಿಪಂ ಸಿಇಒ ಬಿ.ಫೌಝೀಯಾ ತರುನ್ನುಮ್‌ ತಿಳಿಸಿದರು.

Advertisement

ನಗರದ ಜಿಪಂನ ಮಿನಿ ವಿಧಾನಸೌಧ ಸಭಾಂಗಣದಲ್ಲಿ ಗುರುವಾರ ಅಂತರ್ಜಲ ಚೇತನ ಯೋಜನೆ ಜಾರಿಗೊಳಿಸಲು ಹಮ್ಮಿಕೊಂಡಿದ್ದ ಅಧಿಕಾರಿಗಳ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿರುವ  ಜಲಮೂಲಗಳಾದ ಕಲ್ಯಾಣಿ, ಗೋಕುಂಟೆ, ಕೆರೆ, ನದಿಗಳನ್ನು ಪುನಃಶ್ಚೇತನಗೊಳಿಸಲು ಹಾಗೂ ಅಂತರ್ಜಲ ಮಟ್ಟ ಹೆಚ್ಚು ಮಾಡಲು ಜಿಲ್ಲಾದ್ಯಂತ ಸುಮಾರು ಒಂದು ಸಾವಿರ ಕಾಮಗಾರಿಗಳನ್ನು ಪ್ರಾರಂಭ ಮಾಡಲಾಗುತ್ತದೆ ಎಂದು  ತಿಳಿಸಿದರು.

ನರೇಗಾ ಯೋಜನೆಯಡಿ, ಜಲ ಸಂರಕ್ಷಣೆ ಕಾಮಗಾರಿಗಳಿಗೆ ಆದ್ಯತೆ ನೀಡಿ, ಅಂತರ್ಜಲ ಮಟ್ಟ ಹೆಚ್ಚಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು. ಅಂರ್ತಜಲ ಯೋಜನೆ ಜಿಲ್ಲೆಯಲ್ಲಿ ನೀರು ಸಂರಕ್ಷಣೆಗೆ ಒತ್ತು ನೀಡುವುದರ  ಜೊತೆಗೆ ಗ್ರಾಮೀಣ ಭಾಗದ ಬಡ ಜನರಿಗೆ ಊರಿನಲ್ಲೇ ಕೆಲಸ ದೊರಕಿಸಿಕೊಡಲಾಗುತ್ತದೆ ಹಾಗೂ ಜಿಲ್ಲೆಯ ಜಲ ಮೂಲಗಳಾದ ಕೆರೆ, ಕುಂಟೆ, ಬದು ನಿರ್ಮಾಣ,

ಗೋಕುಂಟೆ ಹಾಗೂ ಪೋಷಕ ಕಾಲುವೆಗಳ ನಿರ್ಮಾಣ ಕಾಮಗಾರಿಗಳನ್ನು  ಕೈಗೊಂಡು ಜಲ ಸಂವರ್ಧನೆ ಹೆಚ್ಚು ಮಾಡಲಾಗುತ್ತದೆ ಎಂದರು. ಸಭೆಯಲ್ಲಿ ಜಿಪಂ ಉಪ ಕಾರ್ಯದರ್ಶಿ ನೋಮೇಶ್‌ ಕುಮಾರ್‌, ಮುಖ್ಯ ಯೋಜನಾಧಿಕಾರಿ ಮಾಧುರಾಮ್‌, ಯೋಜನಾ ನಿರ್ದೇಶಕರಾದ ಗಿರಿಜಾ ಶಂಕರ್‌, ಚಿಕ್ಕಬಳ್ಳಾಪುರ  ತಾಪಂ ಇಒ ಹರ್ಷವರ್ಧನ್‌ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next