Advertisement

ನಗರದಲ್ಲಿ ಜೆಡಿಎಸ್‌ ವಿಕಾಸಪರ್ವಕ್ಕೆ ಚಾಲನೆ

12:33 PM Mar 07, 2018 | Team Udayavani |

ಬೆಂಗಳೂರು: ಕಾಂಗ್ರೆಸ್‌ ಹಾಗೂ ಬಿಜೆಪಿ ಬಿಬಿಎಂಪಿಯಲ್ಲಿ ಆಡಳಿತ ನಡೆಸಿದಾಗ ನಡೆದ ಹಗರಣಗಳು, ಭ್ರಷ್ಟಾಚಾರ ಪ್ರಕರಣಗಳ ಬಗ್ಗೆ ಜನಜಾಗೃತಿ ಮೂಡಿಸಿ ಜೆಡಿಎಸ್‌ನ ಸಾಧನೆ ಜನರಿಗೆ ತಲುಪಿಸುವ “ವಿಕಾಸ ಪರ್ವ’ಕ್ಕೆ ಮಂಗಳವಾರ ಚಾಲನೆ ನೀಡಲಾಯಿತು.

Advertisement

ನಗರದ 28 ವಿಧಾನಸಭೆ ಕ್ಷೇತ್ರಗಳಲ್ಲಿ ನಿರಂತರವಾಗಿ ನಡೆಯಲಿರುವ ಯಾತ್ರೆಯನ್ನು ಬಸವನಗುಡಿಯ ದೊಡ್ಡ ಗಣೇಶ ದೇವಾಲಯದಲ್ಲಿ ಪೂಜೆ ಸಲ್ಲಿಸುವ ಮೂಲಕ ಆರಂಭಿಸಲಾಯಿತು. ಪಕ್ಷದ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಿ.ಜಿ.ಆರ್‌.ಸಿಂದ್ಯಾ, ವಿಧಾನಪರಿಷತ್‌ ಸದಸ್ಯ ಟಿ.ಎ.ಶರವಣ, ಶಾಸಕ ಗೋಪಾಲಯ್ಯ, ಮುಖಂಡರಾದ ಬಾಗೇಗೌಡ, ಪ್ರಕಾಶ್‌, ಚಂದ್ರಶೇಖರ್‌, ರಮೇಶ್‌ಗೌಡ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಬೃಹತ್‌ ಮೆರವಣಿಗೆ ನಡೆಸಿ ಕರಪತ್ರ, ಸಾಧನೆ ಹಾಗೂ ಪ್ರಣಾಳಿಕೆಯ ಘೋಷಣೆಗಳ ಕೈಪಿಡಿ ಹಂಚಿದರು.

 ಈ ವೇಳೆ ಮಾತನಾಡಿದ ಪಿ.ಜಿ.ಆರ್‌.ಸಿಂದ್ಯಾ, ಕಾಂಗ್ರೆಸ್‌ ಹಾಗೂ ಬಿಜೆಪಿ ಪರಸ್ಪರ ಕೆಸೆರೆರೆಚಾಟದಲ್ಲಿ ನಿರತವಾಗಿವೆ. ಎರಡೂ ಪಕ್ಷಗಳಿಗೆ ಜನಸಾಮಾನ್ಯರ ಬಗ್ಗೆ ಕಾಳಜಿಯಿಲ್ಲ. ನಗರದ ಜನರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮಾತನಾಡದೆ ಪರ್ಸಂಟೇಜ್‌ ಆರೋಪಗಳಲ್ಲಿ ತೊಡಗಿದ್ದಾರೆ ಎಂದು ದೂರಿದರು.

ದೇವೇಗೌಡರು, ಕುಮಾರಸ್ವಾಮಿಯವರು ಬೆಂಗಳೂರು ಅಭಿವೃದ್ಧಿಗೆ ನೀಡಿರುವ ಕೊಡುಗೆಗಳು ಹಾಗೂ ಮುಂದೆ ಅಧಿಕಾರಕ್ಕೆ ಬಂದರೆ ಜೆಡಿಎಸ್‌ನ ಕಾರ್ಯಕ್ರಮಗಳೇನು ಎಂಬುದನ್ನು ಜನರಿಗೆ ತಿಳಿಸಲಾಗುವುದು ಎಂದು ಹೇಳಿದರು.

ರೈತರ ಜಮೀನು ಗುಳುಂ ಮಾಡಿ ಪರಿಹಾರ ಕೊಡದ ಆರೋಪ ಎದುರಿಸುತ್ತಿರುವ ನೈಸ್‌ ಸಂಸ್ಥೆಯ ಮುಖ್ಯಸ್ಥ ಅಶೋಕ್‌ ಖೇಣಿ ಅವರನ್ನು ಕಾಂಗ್ರೆಸ್‌ಗೆ ಸೇರಿಸಿಕೊಂಡಿರುವುದು ನಾಚೀಗೇಡು ಎಂದು ಆಕ್ರೋಶ ವ್ಯಕ್ತಪಡಿಸಿದರು.

Advertisement

ವಿಧಾನಪರಿಷತ್‌ ಸದಸ್ಯ ಟಿ.ಎ.ಶರವಣ ಮಾತನಾಡಿ, ಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷಗಳು ಬೆಂಗಳೂರಿನಲ್ಲಿ ಅಭಿವೃದ್ಧಿ ಹೆಸರಿನಲ್ಲಿ ಲೂಟಿ ಹೊಡೆದಿವೆ. ಸಾವಿರಾರು ಕೋಟಿ ರೂ. ಭ್ರಷ್ಟಾಚಾರ ನಡೆದಿದೆ. ಬಿಜೆಪಿ ಬೆಂಗಳೂರು ಉಳಿಸಿ ಎಂದು ಪಾದಯಾತ್ರೆ ನಡೆಸುತ್ತಿರುವುದು ಹಾಸ್ಯಾಸ್ಪದ ಎಂದು ಟೀಕಿಸಿದರು. ಬಿಜೆಪಿ ಹಾಗೂ ಕಾಂಗ್ರೆಸ್‌ನವರು ಬೆಂಗಳೂರು ಅಭಿವೃದ್ಧಿ ವಿಷಯದಲ್ಲಿ ಬಹಿರಂಗ ಚರ್ಚೆಗೆ ಬರಲಿ ಎಂದು ಸವಾಲು ಹಾಕಿದರು.

Advertisement

Udayavani is now on Telegram. Click here to join our channel and stay updated with the latest news.

Next