Advertisement

ಬಹು ನಿರೀಕ್ಷಿತ ಕನ್ನಡ ಸಾಹಿತ್ಯ ಪರಿಷತ್ತಿನ ಆ್ಯಪ್ ಲೋಕಾರ್ಪಣೆಗೆ ಕ್ಷಣಗಣನೆ

10:11 PM Aug 03, 2022 | Team Udayavani |

ಬೆಂಗಳೂರು:  ಕನ್ನಡ ಸಾಹಿತ್ಯ ಪರಿಷತ್ತಿನ ನೂತನವಾಗಿ ಸಿದ್ದಪಡಿಸಲಾಗಿರುವ ವಿನೂತನ ತಂತ್ರಜ್ಞಾನವುಳ್ಳ ಕನ್ನಡ ಸಾಹಿತ್ಯ ಪರಿಷತ್ತು ಎನ್ನುವ ಹೆಸರಿನ ಆ್ಯಪ್ ಗುರುವಾರ(ಆಗಸ್ಟ್ ೦೪) ಸಂಜೆ 5.30 ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಲೋಕಾರ್ಪಣೆ ಮಾಡಲಿದ್ದಾರೆ.

Advertisement

ಕನ್ನಡ ನಾಡಿನ ಹೆಮ್ಮೆಯ ಕನ್ನಡ ಸಾಹಿತ್ಯ ಪರಿಷತ್ತು ಪ್ರಸ್ತುತ ಕಾಲಘಟಕ್ಕೆ ತಕ್ಕಂತೆ ಆತ್ಯಾಧುನಿಕ ತಂತ್ರಜ್ಞಾನವನ್ನು ಹೊಂದಿರುವ ವಿನೂತನ ಆ್ಯಪ್ ರೂಪಿಸಿದ್ದು, ಈ ಆ್ಯಪ್ ಕನ್ನಡ ಸಾಹಿತ್ಯ ಪರಿಷತ್ತನ್ನು ಜನ ಸಾಮಾನ್ಯರ ಪರಿಷತ್ತನ್ನಾಗಿಸುವ ಕೊಂಡಿಯಾಗಲಿದೆ. ವಿಶ್ವದ್ಯಾಂತ ಇರುವ ಕನ್ನಡವನ್ನು ಹಾಗೂ ಕನ್ನಡಿಗರನ್ನು ಒಗ್ಗೂಡಿಸುವ ಪ್ರಯತ್ನಕ್ಕೆ ಪರಿಷತ್ತು ಮುಂದಾಗಿದೆ. ಹೊರರಾಜ್ಯ, ಕೇಂದ್ರಾಡಳಿತ ಪ್ರದೇಶ ಮತ್ತು ಹೊರೆದೇಶಗಳಲ್ಲಿ ಘಟಕಗಳನ್ನು ಸ್ಥಾಪಿಸುಯವ ದೃಷ್ಟಿಯಿಂದ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾಗಿರುವ ಕನ್ನಡ ಸಾಹಿತ್ಯ ಪರಿಷತ್ತು ಕಾರ್ಯಾರಂಭ ಮಾಡಿದೆ. ಈ ಹಿನ್ನೆಲೆಯಲ್ಲಿ ಕೋಟಿ ಸದಸ್ಯತ್ವದ ಅಭಿಯಾನದಲ್ಲಿ ಶ್ರೀಸಾಮಾನ್ಯನೂ ಸಹ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯತ್ವ ಪಡೆಯುವುದಕ್ಕೆ ಅನುಕೂಲವಾಗುವಂತೆ ಆ್ಯಪ್ ಸಿದ್ದಪಡಿಸಲಾಗಿದೆ.

ಕನ್ನಡಿಗರು ಮನೆಯಲ್ಲೇ ಕುಳಿತು ಸುಲಭವಾಗಿ ಆನ್ಲೈನ್ ಮೂಲಕ ಸದಸ್ಯತ್ವವನ್ನು ಪಡೆಯುವುದರ ಜೊತೆಗೆ ಕನ್ನಡ ಸಾಹಿತ್ಯ ಪರಿಷತ್ತಿನ ಎಲ್ಲಾ ಕಾರ್ಯ ಚಟುವಟಿಕೆಗಳು, ಕಾರ್ಯಕ್ರಮಗಳು, ಪುಸ್ತಕಗಳು, ಪ್ರಟಣೆಗಳು, ಸ್ಮಾರ್ಟ್ಕಾರ್ಡ್ ಪಡೆದುಕೊಳ್ಳುವುದು ಸೇರಿದಂತೆ ಎಲ್ಲಾ ಮಾಹಿತಿಗಳುಳ್ಳ ತಂತ್ರಜ್ಞಾನವನ್ನು ಪ್ರಸ್ತುತ ಆ್ಯಪ್ ನಲ್ಲಿ ಅಳವಡಿಸಲಾಗಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಲೋಕಾರ್ಪಣೆ ಮಾಡಿದ ಮರು ಕ್ಷಣದಿಂದ ಈ ಆ್ಯಪ್ ಸಾರ್ವಜನಿಕರ ಉಪಯೋಗಕ್ಕೆ ಸಿಗಲಿದೆ. ಕನ್ನಡಿಗರು ಪ್ರಪಂಚದ ಯಾವುದೇ ಮೂಲೆಯಲ್ಲಿ ಇದ್ದರೂ ಈ ಆ್ಯಪ್ ಮೂಲಕ ಕನ್ನಡಿಗರ ಅಸ್ಮಿತೆಯ ಪ್ರತೀಕವಾಗಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯತ್ವ ಪಡೆಯುವುದರೊಂದಿಗೆ ಕನ್ನಡ ಕಟ್ಟಿ ಬೆಳೆಸುವ ನಿಟ್ಟಿಲ್ಲಿ ಸಹಭಾಗಿತ್ವ ನೀಡಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ಕೋರಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next