Advertisement

ದೀಪೋತ್ಸವ ಪರಿವರ್ತನೆಗೆ ನಾಂದಿ

04:17 PM Dec 07, 2020 | Adarsha |

ಯಾದಗಿರಿ: ಕಾರ್ತಿಕ ಮಾಸದ ಪವಿತ್ರ ದಿನಗಳಲ್ಲಿ ಹಲವಾರು ವರ್ಷಗಳಿಂದ ಇಲ್ಲಿ ನಡೆದುಕೊಂಡು ಬಂದಿರುವ ಲಕ್ಷ ದೀಪೋತ್ಸವ ಕಾರ್ಯಕ್ರಮ ತೆಲಂಗಾಣ, ಆಂಧ್ರಪ್ರದೇಶ ಹಾಗೂ ಕರ್ನಾಟಕ ಭಕ್ತರಲ್ಲಿ ಪರಸ್ಪರ ಸಾಮರಸ್ಯ ಮೂಡಿಸಿದೆ. ಇದು ಎಲ್ಲರ ಬದುಕಿನಲ್ಲಿ ಪರಿವರ್ತನೆಗೆ ನಾಂದಿಯಾಗಲಿ ಎಂದು ಶ್ರೀಶೈಲ ಪೀಠದ ಜಗದ್ಗುರು ಡಾ| ಚನ್ನಸಿದ್ಧರಾಮ ಪಂಡಿತಾರಾದ್ಯ ಶಿವಾಚಾರ್ಯ ಭಗವತ್ಪಾದರು ಹೇಳಿದರು.

Advertisement

ನೆರೆಯ ಆಂಧ್ರಪ್ರದೇಶದ ಶ್ರೀಶೈಲನಲ್ಲಿರುವ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ದೇವಸ್ಥಾನದಲ್ಲಿ ಗದಗ ಹೇಮರೆಡ್ಡಿ ಮಲ್ಲಮ್ಮ ರಾಜ್ಯ ಯುವ ಜಾಗೃತ ವೇದಿಕೆ ಹಮ್ಮಿಕೊಂಡಿದ್ದ 9ನೇ ದೀಪೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಆಶೀರ್ವಚನ ನೀಡಿದರು. ಭಾರತದಲ್ಲಿ ಅನೇಕ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾದ ಶ್ರೀಶೈಲ ಕ್ಷೇತ್ರ ವಿಶಿಷ್ಟವಾಗಿ ಭೂ ಕೈಲಾಸ ಎಂದು ಹೆಸರಾಗಿದೆ.

ಇಲ್ಲಿಗೆ ಆಗಮಿಸಿ ದೇವರ ದರ್ಶನ ಪಡೆಯುವ ಭಕ್ತರ ಬದುಕು ಪಾವನವಾಗುತ್ತದೆ. ಕನ್ನಡಿಗರು ಈ ಕ್ಷೇತ್ರದೊಂದಿಗೆ ಸಾವಿರಾರು ವರ್ಷಗಳ ಸಂಬಂಧ ಹೊಂದುವ ಜತೆಗೆ ಪ್ರಗತಿಗೆ ಅವರು ನೀಡಿರುವ ಕೊಡುಗೆ ಅಪಾರವಾಗಿದೆ ಎಂದರು.

ಇದನ್ನೂ ಓದಿ:ಗೋ ಸಂಪತ್ತು ಉಳಿಸಿ-ಬೆಳೆಸಿ: ಮಾಮನಿ

ಕರ್ನಾಟಕದಲ್ಲಿರುವ ವೀರಶೈವ ಲಿಂಗಾಯತ ಸಮಾಜದ ಎಲ್ಲಾ ಒಳ ಪಂಗಡದವರನ್ನು ರಾಜ್ಯ ಸರ್ಕಾರ ಹಿಂದುಳಿದ ಪಟ್ಟಿಗೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು. ಅಂದಾಗ ಮಾತ್ರ ಬದಲಾವಣೆ ಕಾಣಲು ಸಾಧ್ಯ ಎಂಬ ಅಭಿಪ್ರಾಯಗಳನ್ನು ಸರ್ಕಾರಕ್ಕೆ ತಿಳಿಸಿದ್ದೇವೆ ಎಂದರು.

Advertisement

ಶ್ರೀಶೈಲ ದೇವಸ್ಥಾನದ ಮುಖ್ಯ ಕಾರ್ಯ ನಿರ್ವಾಹಕ ಅ ಧಿಕಾರಿ ಕೆ.ಎಸ್‌. ರಾಮರಾವ್‌ ಮಾತನಾಡಿ, ಈ ಧಾರ್ಮಿಕ ಕ್ಷೇತ್ರಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡಿಗ ಭಕ್ತರು ಪ್ರತಿ ವರ್ಷ ಆಗಮಿಸಿ ದೇವರ ದರ್ಶನ ಪಡೆಯುತ್ತಾರೆ. ಅವರಿಗೆ ನಾವು ಅಗತ್ಯ ಸೌಕರ್ಯ ನೀಡಲು ಒತ್ತು ನೀಡಿದ್ದೇವೆ ಎಂದರು.

ನರೇಗಲ್ಲನ ಮಲ್ಲಿಕಾರ್ಜುನ ಶಿವಾಚಾರ್ಯರು, ಅಮ್ಮಿನಬಾವಿಯ ಅಭಿನವ ಶಾಂತಲಿಂಗ ಶಿವಾಚಾರ್ಯರು ಮಾತನಾಡಿದರು. ಹರಿದಾಸ್‌, ಸಾಯಿಕುಮಾರ, ಗುರುಪಾದಯ್ಯ ಸ್ವಾಮಿ, ಓಂಕಾರಯ್ಯಸ್ವಾಮಿ, ವೀರಭದ್ರ ಸ್ವಾಮಿ, ಶೋಭಾ ಮೇಟಿ, ಶರಣೆ ನೀಲಮ್ಮ ಇನ್ನಿತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next