Advertisement

ಗೋವಿಂದರಾಜನಗರದಲ್ಲಿ ಹೆರಿಗೆ ಆಸ್ಪತ್ರೆಗೆ ಚಾಲನೆ

04:55 AM May 23, 2020 | Lakshmi GovindaRaj |

ಬೆಂಗಳೂರು: ಗೋವಿಂದರಾಜನಗರ ವಿಧಾನಸಭೆ ಕ್ಷೇತ್ರದ ಗೋವಿಂದರಾಜ ನಗರ ವಾರ್ಡ್‌ನಲ್ಲಿ 7 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ 10 ಹಾಸಿಗೆಗಳ  ಹೆರಿಗೆ ಆಸ್ಪತ್ರೆಯನ್ನು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಗುರುವಾರ  ಉದ್ಘಾಟಿಸಿದರು. ದಾಸರಹಳ್ಳಿ ವಾರ್ಡ್‌ನಲ್ಲಿ 35 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ 200 ಹಾಸಿಗೆಗಳ ಆಸ್ಪತ್ರೆಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಕೊರೊನಾ ವಿರುದಟ ಹೋರಾಟದಲ್ಲಿ ವೈದ್ಯಕೀಯ ಸಿಬ್ಬಂದಿ, ಆಶಾ ಕಾರ್ಯ  ಕರ್ತೆ ಯರು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.

Advertisement

ಗೋವಿಂದರಾಜನಗರದಲ್ಲಿ ಸುಸಜ್ಜಿತ ಹೆರಿಗೆ ಆಸ್ಪತ್ರೆ ನಿರ್ಮಾಣಗೊಂಡಿರುವುದು ಸಂತೋಷದ ವಿಷಯ. ಇದರಿಂದ ಸ್ಥಳೀಯ ಜನರು ಬೇರೆ ಕಡೆ ಆಸ್ಪತ್ರೆ ಸೇವೆ ಹೋಗುವುದು ತಪ್ಪಲಿದೆ ಎಂದು ಹೇಳಿದರು. ಸಚಿವ ಸೋಮಣ್ಣ ಮಾತನಾಡಿ, ಕೊರೊನಾ ಸಂಕಷ್ಟ ಕಾಲದಲ್ಲಿ ವೈದ್ಯರ ನೆರವು ಅತ್ಯಗತ್ಯವಾಗಿದೆ. ಕೊರೊನಾ ಸಂದರ್ಭದಲ್ಲಿ  ಗೋವಿಂದರಜನಗರ ವಾರ್ಡ್‌ನಲ್ಲಿ ಜನರಿಗೆ ಅನುಕೂಲ ಕಲ್ಪಿಸಲು ಹೆರಿಗೆ ಆಸ್ಪತ್ರೆ ನಿರ್ಮಿಸಲಾಗಿದೆ. ಇದರ ಜತೆಗೆ ವಿಕ್ಟೋರಿಯಾ ಆಸ್ಪತ್ರೆ ಹಾಗೂ ಕೆ.ಸಿ.ಜನರಲ್‌ ಆಸ್ಪತ್ರೆ ಮಾದರಿಯಲ್ಲಿ ಅಗ್ರಹಾರ ದಾಸರಹಳ್ಳಿಯಲ್ಲಿ 200 ಹಾಸಿಗೆಗಳ ಆಸ್ಪತ್ರೆ ನಿರ್ಮಿಸಲಾಗುತ್ತಿದೆ. ಇದರಿಂದ  ಆ ಭಾಗದ ಜನರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ 10 ಲಕ್ಷ ವಸತಿ ನಿರ್ಮಾಣ ಯೋಜನೆ ರೂಪಿಸಲಾಗಿದೆ. ಈಗಾಗಲೇ 1.40 ಲಕ್ಷ ಮನೆ ನಿರ್ಮಿಸಲು ಕಂದಾಯ ಸಚಿವರು ಒಂದು ಸಾವಿರ ಎಕರೆ ಜಮೀನು ನೀಡಿದ್ದಾರೆ ಎಂದು ಹೇಳಿದರು. ಕಂದಾಯ ಸಚಿವ ಆರ್‌.ಅಶೋಕ್‌ ಮಾತನಾಡಿದರು. ಮೇಯರ್‌ ಗೌತಮ್‌ ಕುಮಾರ್‌, ಉಪ ಮೇಯರ್‌ ಮೋಹನ್‌ ಕುಮಾರ್‌, ಸಂಸದ ತೇಜಸ್ವಿ ಸೂರ್ಯ, ಪಾಲಿಕೆ  ಸದಸರಾದ್ಯ ಉಮೇಶ್‌ ಶೆಟ್ಟಿ, ಶಿಲ್ಪಾ ಶ್ರೀಧರ್‌ , ಆಯುಕ್ತ ಅನಿಲ್‌ ಕುಮಾರ್‌, ಪಾಲಿಕೆ ಸದಸ್ಯ ಉಮೇಶ್‌ ಶೆಟ್ಟಿ ಮೊದಲಾದವರು ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next