Advertisement

ಉತ್ತರ ಪಿನಾಕಿನಿ ನದಿ ಪುನಶ್ಚೇತನಕ್ಕೆ ಚಾಲನೆ

07:48 AM May 19, 2020 | Lakshmi GovindaRaj |

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ನರೇಗಾ ಯೋಜನೆಯಡಿ ವಿಶೇಷವಾದ ಅಂತರ್ಜಲ ಚೇತನ ಹಾಗೂ ಬದು ನಿರ್ಮಾಣ ಕಾಮಗಾರಿಗಳಿಗೆ ಹಾಗೂ ಉತ್ತರ ಪಿನಾಕಿನಿ ನದಿ ಪುನಶ್ಚೇತನಕ್ಕೆ ಮಂಗಳವಾರ ಗಾಮೀಣಾಭಿವೃದ್ಧಿ  ಮತ್ತು ಪಂಚಾಯತ್‌ ರಾಜ್‌ ಇಲಾಖೆ ಸಚಿವ ಕೆ.ಎಸ್‌.ಈಶ್ವರಪ್ಪ ಚಾಲನೆ ನೀಡಲಿದ್ದಾರೆ ಎಂದು ಜಿಪಂ ಅಧ್ಯಕ್ಷ ಎಂ.ಬಿ ಚಿಕ್ಕನರಸಿಂಹಯ್ಯ ತಿಳಿಸಿದರು.

Advertisement

ನಗರದ ಜಿಪಂ ಸಭಾಂಗಣದಲ್ಲಿ ಸೋಮ  ವಾರ ಸುದ್ದಿಗೋಷ್ಠಿ ನಡೆಸಿ ಮಾತ  ನಾಡಿ, ಜಿಲ್ಲೆಯು ಸತತವಾಗಿ ಬರ ಗಾಲಕ್ಕೆ ತುತ್ತಾಗುತ್ತಿರುವ ಹಿನ್ನೆಲೆಯಲ್ಲಿ ಬರಗಾಲ ತಡೆಗಟ್ಟುವ ನಿಟ್ಟಿನಲ್ಲಿ ಜಲ ಸಂರಕ್ಷಣೆ ಕಾಮಗಾರಿಗಳಿಗೆ ಆದ್ಯತೆ ನೀಡ ಲಾಗಿದ್ದು, ಸುಮಾರು 15 ಸಾವಿರಕ್ಕೂ ಅಧಿಕ  ಕಾಮಗಾರಿ ಹಮ್ಮಿಕೊಳ್ಳಲಾಗಿದೆ ಎಂದರು. ಅಂತರ್ಜಲಮಟ್ಟವನ್ನು ಪರಿಣಾಮಕಾರಿಯಾಗಿ ಹೆಚ್ಚಿಸುವ ನಿಟ್ಟಿನಲ್ಲಿ, ಜಿ

ಲ್ಲಾ ತಾಲೂಕು ಹಾಗೂ ಎಲ್ಲಾ ಗ್ರಾಪಂಗಳು, ಬೆಂಗಳೂರಿನ ಆರ್ಟ್‌ ಆಫ್ ಲಿವಿಂಗ್‌ ಸಂಸ್ಥೆ ಮತ್ತು  ಚಿಂತಾಮಣಿ ಯ ಎಫ್ಇಎಸ್‌ ಸಂಸ್ಥೆ ಸಹಯೋಗ  ದಲ್ಲಿ ಜಲ ಸಂರಕ್ಷಣೆ ಮತ್ತು ಅಂತರ್ಜಲ ವೃದ್ಧಿಗೆ ಉದ್ಯೋಗ ಖಾತ್ರಿ ಯೋಜನೆಯಡಿ ಅಂತರ್ಜಲ ಚೇತನ ಹಾಗೂ ಬದು ನಿರ್ಮಾಣ ಕಾಮಗಾರಿಗಳನ್ನು ಜಿಲ್ಲಾದ್ಯಂತ  ಗೊಳ್ಳಲಾಗುತ್ತಿದೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಜಿಪಂ ಸಿಇಒ ಬಿ.ಫೌಝೀಯಾ ತರುನ್ನುಮ್‌ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next