ದೊಡ್ಡಬಳ್ಳಾಪುರ: ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳಿಗೆ ಸ ರ್ಕಾರ ಅಗತ್ಯ ಬೆಂಬ ಲ ನೀಡಲಿದ್ದು, ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರಗಳ ಅಭಿವೃದ್ಧಿಗಾಗಿ 10 ಕೋಟಿ ರೂ.ಗಳ ಅನುದಾನವನ್ನು ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ.
ದೊಡ್ಡಬಳ್ಳಾಪುರದ ಆನಿಬೆಸೆಂಟ್ ಪಾರ್ಕ್‌ನಲ್ಲಿ ಜನವರಿ 2ರ ವರೆಗೆ ನಡೆಯಲಿರುವ 28ನೇ ಕರ್ನಾಟಕ ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್ ಜಾಂಬೋರೇಟ್‌ಗೆ ಚಾಲನೆ ನೀಡಿ ಅವರು ಮಾತನಾಡಿದರು. ಸ್ಕೌಟ್ಸ್ ಮತ್ತು ಗೈಡ್ಸ್‌ನ 100 ವರ್ಷಗಳ ಸೇವೆ ಅನನ್ಯವಾಗಿದೆ.
ಶಿಸ್ತು ಮತ್ತು ರಾಷ್ಟ್ರೀಯತೆ, ಸೇವಾ ಮನೋಭಾವ ಮೂಡಿಸುವಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸಹಕಾರಿಯಾಗಲಿದೆ. ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗುವ ಹಾಗೂ ಉತ್ತಮ ಭವಿಷ್ಯ ವನ್ನು ರೂ ಪಿ ಸುವ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕಗಳು ಶಾಲೆಗಳಲ್ಲಿ ಹೆಚ್ಚಾಗಿ ಸ್ಥಾಪನೆಯಾಗಬೇಕಿದೆ. ಸರ್ಕಾರದೊಂದಿಗೆ ಸ್ಥಳೀಯ ಸಂಸ್ಥೆಗಳು ಸಹ ಇದಕ್ಕೆ ಉತ್ತೇಜನ ನೀಡಬೇಕಿದೆ ಎಂದರು.
ಕರ್ನಾಟಕದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಸ್ವಚ್ಛಭಾರತ್, ನೀರಿನ ಸಂರಕ್ಷಣೆ ಮೊದಲಾದ ವಿಶಿಷ್ಟ ಕಾರ್ಯಕ್ರಮ ಗಳನ್ನು ರೂಪಿಸಿರುವುದು ಶ್ಲಾಘನೀಯ. ರಾಜ್ಯದಲ್ಲಿ ಅಂತಾರಾಷ್ಟ್ರೀಯ ಜಾಂಬೋರೇಟ್ ಆಯೋಜಿಸಲು ಮಾಡಿರುವ ಮನವಿ ಕುರಿತಂತೆ ಪ್ರಧಾನಿ ಜತೆ ಚರ್ಚಿಸಲಾಗುವುದು.
-ಡಾ.ಅನಿಲ್ ಕುಮಾರ್ ಜೈನ್, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರಾಧ್ಯಕ್ಷ
ಕರ್ನಾಟಕ ಸ್ಕೌಟ್ಸ್ ಮತ್ತು ಗೈಡ್ಸ್ ದೇಶದಲ್ಲಿ ಪ್ರಥಮ ಸ್ಥಾನ ಪಡೆದಿದ್ದು, 7 ಬಹುಮಾನಗಳನ್ನು ಗಳಿಸಿದೆ. ಮುಂದಿನ ವರ್ಷ ಅಂತಾರಾಷ್ಟ್ರೀಯ ಜಾಂಬೋರೇಟ್ ನಡೆಸಲು ಅನುಮತಿ ನೀಡುವಂತೆ ಕೋರಿ ವಿಶ್ವಸಂಸ್ಥೆಗೆ ಮನವಿ ಸಲ್ಲಿಸಲಾಗಿದೆ. ಇದಕ್ಕೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಅಗತ್ಯ ನೆರವು ನೀಡಬೇಕು.
-ಪಿ.ಜಿ.ಆರ್.ಸಿಂಧ್ಯಾ, ಸ್ಕೌಟ್ಸ್ ಮತ್ತು ಗೈಡ್ಸ್‌ನ ರಾಜ್ಯ ಮುಖ್ಯ ಆಯುಕ್ತ