Advertisement

Minister Parameshwara ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಹದಗೆಟ್ಟಿಲ್ಲ

11:35 PM May 18, 2024 | Team Udayavani |

ತುಮಕೂರು: ಬಿಜೆಪಿಯವರು ಹೇಳುವಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ. ಎಲ್ಲವೂ ಸರಿಯಾಗಿದೆ. ಜನತೆ ಶಾಂತಿ-ನೆಮ್ಮದಿಯಿಂದ ಇರಲು ಏನು ಕ್ರಮ ಬೇಕಾದರೂ ತೆಗೆದುಕೊಳ್ಳುತ್ತೇವೆ ಎಂದು ಗೃಹ ಸಚಿವ ಡಾ| ಜಿ. ಪರಮೇಶ್ವರ್‌ ತಿಳಿಸಿದರು.

Advertisement

ಸುದ್ದಿಗಾರರ ಜತೆ ಮಾತನಾಡಿ, ಬಿಜೆಪಿಯವರು ಶಾಂತಿ ಕದಡಲು ಎಷ್ಟು ಪ್ರಯತ್ನ ನಡೆಸಿದರೂ ಅದನ್ನು ನಿಯಂತ್ರಿಸುವ ಶಕ್ತಿ ನಮ್ಮ ಸರಕಾರಕ್ಕಿದೆ ಎಂದು ತಿರುಗೇಟು ನೀಡಿದರು.

ರಾಜ್ಯದಲ್ಲಿ ಅಪರಾಧ ಪ್ರಕರಣ ಹೆಚ್ಚಳವಾಗುತ್ತಿರುವ ಬಗ್ಗೆ ಪೊಲೀಸ್‌ ಅಧಿಕಾರಿಗಳೊಂದಿಗೆ ಚರ್ಚೆ ಮಾಡುತ್ತೇನೆ. ಒಂದೊಂದು ಘಟನೆಗೂ ಒಂದೊಂದು ಕಾರಣ ಇರುತ್ತದೆ. ಎಲ್ಲದರ ಬಗ್ಗೆಯೂ ಅಧಿಕಾರಿಗಳೊಂದಿಗೆ ಕೂಲಂಕಶವಾಗಿ ಚರ್ಚಿಸಿ ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

ಬಿಜೆಪಿಯವರ ಕಾಲದಲ್ಲಿ ಎಷ್ಟು ಕೊಲೆಗಳು ಆಗಿದ್ದವು ಎಂಬ ಬಗ್ಗೆ ಅಂಕಿ-ಅಂಶ ಸಹಿತ ಹೇಳುತ್ತೇನೆ. ಆಗ ಯಾರ ಅಧಿಕಾರದ ಅವಧಿಯಲ್ಲಿ ರಾಜ್ಯ ಸುರಕ್ಷಿತವಾಗಿದೆ ಎಂಬುದು ಗೊತ್ತಾಗುತ್ತದೆ. ಇನ್ನೂ ನಾಲ್ಕು ವರ್ಷ ಬಿಜೆಪಿಯವರು ರಾಜೀನಾಮೆ ಕೇಳುತ್ತಿರಬೇಕು. ಅವರಿಗೆ ನಮ್ಮ ರಾಜೀನಾಮೆ ಕೇಳುವುದೇ ಕೆಲಸ ಎಂದು ಅವರು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next