ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ವಿಧಾನ ಮಂಡಲದ ಪ್ರಸಕ್ತ ಸಾಲಿನ ಮೊದಲ ಅಧಿವೇಶನ ಸೋಮವಾರ ಆರಂಭವಾಗಿದ್ದು, ಬೆಳಗ್ಗೆ 11 ಗಂಟೆಗೆ ರಾಜ್ಯಪಾಲರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡುವ ಮೂಲಕ ಚಾಲನೆ ನೀಡಿದ್ದಾರೆ.
ಬಿಜೆಪಿಗೆ ತಿರುಗೇಟು
ರಾಜ್ಯಪಾಲರ ಭಾಷಣದಲ್ಲಿ ಸರ್ಕಾರದ ಹಲವು ಸಾಧನೆಗಳನ್ನು ಬಿಂಬಿಸಲಾಗಿತ್ತು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದ್ದು, ಕೋಮು ಗಲಭೆಗಳು ನಡೆದಾಗ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಭಾಷಣದಲ್ಲಿ ಹೇಳಿದರು.
ಕಾನೂನು ಸುವ್ಯವಸ್ಥೆ ಸರಿಯಿಲ್ಲ ಎಂದು ಆರೋಪಿಸಿದ್ದ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಗೆ ಕಾಂಗ್ರೆಸ್ ಸರ್ಕಾರ ಈ ಮೂಲಕ ತಿರುಗೇಟು ನೀಡಿದೆ.
ನೂರಕ್ಕು ಹೆಚ್ಚು ಶಾಸಕರು ಗೈರು
ಸದನಕ್ಕೆ ನೂರಕ್ಕು ಹೆಚ್ಚು ಶಾಸಕರು ಗೈರಾಗಿದ್ದರು ಎನ್ನುವುದು ವರದಿಯಾಗಿದೆ.