Advertisement

ಕಾನೂನು ಅರಿವು-ನೆರವು ಕಾರ್ಯಕ್ರಮ

06:11 PM Nov 16, 2021 | Team Udayavani |

ಚಿತ್ತಾಪುರ: ಸಮಾಜದಲ್ಲಿ ಅನ್ಯಾಯಗೊಳ ಗಾದವರಿಗೆ ನ್ಯಾಯ ಹಾಗೂ ರಕ್ಷಣೆ ನೀಡುವಲ್ಲಿ ಪೊಲೀಸ್‌ ಇಲಾಖೆ ಮತ್ತು ನ್ಯಾಯಾಂಗ ಪ್ರಮುಖ ಪಾತ್ರ ವಹಿಸುತ್ತವೆ ಎಂದು ಹಿರಿಯ ಸಿವಿಲ್‌ ನ್ಯಾಯಾಧಿಧೀಶ ಮಹ್ಮದ ಮೊಹಿನುದ್ದಿನ್‌ ಹೇಳಿದರು.

Advertisement

ಪಟ್ಟಣದ ತಾಪಂ ಸಭಾಂಗಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ಚಿತ್ತಾಪುರ, ವಕೀಲರ ಸಂಘ ಹಾಗೂ ಪೊಲೀಸ್‌ ಇಲಾಖೆ ಆಶ್ರಯದಲ್ಲಿ 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಅಂಗವಾಗಿ ನಡೆದ ಕಾನೂನು ಅರಿವು-ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ತಪ್ಪು ಮಾಡಿದವರಿಗೆ ಶಿಕ್ಷೆ ನೀಡಬೇಕು. ಅನಾಮಧೇಯರಿಗೆ, ಅನ್ಯಾಯಕ್ಕೆ ಒಳಗಾದವರಿಗೆ ಶಿಕ್ಷೆ ತಪ್ಪಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಇದು ನಮ್ಮ ಕರ್ತವ್ಯವಾಗಿದೆ ಎಂದರು.

ಕಿರಿಯ ಶ್ರೇಣಿ ಸಿವಿಲ್‌ ನ್ಯಾಯಾಧೀಶ ಸುಭಾಶ್ಚಂದ್ರ ರಾಠೊಡ ಮಾತನಾಡಿದರು. ಕಲಬುರಗಿ ಜಿಲ್ಲಾ ನ್ಯಾಯಾಲಯದ ಪಬ್ಲಿಕ್‌ ಪ್ರಾಸಿಕ್ಯೂಟರ್‌ ನಾಗರಾಜ ಕ್ರಿಮಿನಲ್‌ ಕಾನೂನುಗಳ ಕುರಿತು ಉಪನ್ಯಾಸ ನೀಡಿದರು. ಶಹಾಬಾದ ಡಿವೈಎಸ್‌ಪಿ ಉಮೇಶ ಚಿಕ್ಕಮಠ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ನ್ಯಾಯವಾದಿಗಳ ಸಂಘದ ಅಧ್ಯಕ್ಷ ಗಂಗಾಧರ ಸಾಲಿಮಠ, ಸರ್ಕಾರಿ ಸಹಾಯಕ ಅಭಿಯೊಜಕ ಅಂಜನಾದೇವಿ, ತಾಪಂ ಇಒ ನೀಲಗಂಗಾ ಬಬಲಾದ್‌, ಚಿತ್ತಾಪುರ ಸಿಪಿಐ ಕೃಷ್ಣಪ್ಪ ಕಲ್ಲದೇವರ, ಶಹಬಾದ, ಕಾಳಗಿ ಸಿಪಿಐ, ಪಿಎಸ್‌ಐ ಪೊಲೀಸ್‌ ಇಲಾಖೆ ಅಧಿ ಕಾರಿಗಳು, ಸಿಬ್ಬಂದಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next