Advertisement

ಅಕ್ಟೋಬರ್‌ನಲ್ಲಿ ಕಾನೂನು ಪದವಿ ಅಂತಿಮ ಪರೀಕ್ಷೆ: ಮಾಧುಸ್ವಾಮಿ

11:07 PM Aug 26, 2020 | mahesh |

ಬೆಂಗಳೂರು: ಕಾನೂನು ಪದವಿಯ ಅಂತಿಮ ವರ್ಷದ ಅಥವಾ ಅಂತಿಮ ಸೆಮಿಸ್ಟರ್‌ ಪರೀಕ್ಷೆಗಳನ್ನು ಅಕ್ಟೋಬರ್‌ನಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದ್ದಾರೆ.

Advertisement

ವಿಧಾನಸೌಧದಲ್ಲಿ ಬುಧವಾರ ನಡೆದ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆ. 21ರಿಂದ ನಡೆಸಲು ಉದ್ದೇಶಿಸಲಾಗಿದ್ದ ಕಾನೂನು ಪದವಿಯ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಅಂತಿಮ ವರ್ಷದ ಅಥವಾ ಅಂತಿಮ ಸೆಮಿಸ್ಟರ್‌ ಪರೀಕ್ಷೆ ಮಾತ್ರ ಅಕ್ಟೋಬರ್‌ನಲ್ಲಿ ನಡೆಸಲಾಗುವುದು ಎಂದು ಹೇಳಿದರು. ಕಾನೂನು ಪದವಿ ಕಾಲೇಜುಗಳ ಪರೀಕ್ಷೆಗಳನ್ನು ಮುಂದೂಡುವಂತೆ ಅನೇಕರು ಆಗ್ರಹಿಸಿದ್ದಾರೆ. ಹೀಗಾಗಿ, ಅಕ್ಟೋಬರ್‌ ಅಥವಾ ಅಂದಿನ ಪರಿಸ್ಥಿತಿಯನ್ನು ನೋಡಿಕೊಂಡು ಹೊಸ ಪರೀಕ್ಷಾ ದಿನಾಂಕವನ್ನು ನಿಗದಿಪಡಿಸಲಾಗುವುದು ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next