Advertisement

ಕಾನೂನು ಪದವಿ ಪುನರಾವರ್ತಿತ ವಿದ್ಯಾರ್ಥಿಗಳಿಗೆ ಕೊನೆಯ ಅವಕಾಶ

05:28 PM Dec 24, 2022 | Team Udayavani |

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಕಾನೂನು ಪದವಿಯ ಪುನರಾವರ್ತಿತ ವಿದ್ಯಾರ್ಥಿಗಳಿಗೆ ಪರೀಕ್ಷೆಗಳನ್ನು ಫೆಬ್ರವರಿ 2023ರಲ್ಲಿ ವಿಶ್ವವಿದ್ಯಾನಿಲಯದಲ್ಲಿ ನಡೆಸಲಾಗುವುದು.

Advertisement

ಪರೀಕ್ಷೆ ಬರೆಯಲು ಬಾಕಿ ಇರುವ ಪುನರಾವರ್ತಿತ ವಿದ್ಯಾರ್ಥಿಗಳು ಆಯಾಯ ಕಾಲೇಜುಗಳಲ್ಲಿ ಪರೀಕ್ಷೆಗೆ ನೋಂದಣಿ ಮಾಡಿಕೊಳ್ಳಬೇಕು.

ಫೆಬ್ರವರಿ 2023ರಲ್ಲಿ ನಡೆಸುವ ಪರೀಕ್ಷೆಗೆ ಹಾಜರಾಗಲು ಕೊನೆಯ ಅವಕಾಶವಾಗಿದ್ದು ಮುಂದಕ್ಕೆ ಪುನರಾವರ್ತಿತ ವಿದ್ಯಾರ್ಥಿಗಳಿಗೆ ಯಾವುದೇ ವಿಷಯಕ್ಕೆ ಸಂಬಂಧಿಸಿ ಕಾನೂನು ಪದವಿ ಪರೀಕ್ಷೆಗಳನ್ನು ನಡೆಸಲಾಗುವುದಿಲ್ಲ ಎಂದು ವಿ.ವಿ. ಪರೀಕ್ಷಾಂಗ ಕುಲಸಚಿವರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next