Advertisement
ತಾಲೂಕಿನ ಅಗಡಿ ಗ್ರಾಮದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ, ಜಿಲ್ಲಾಡಳಿತ, ಪೊಲೀಸ್ ಇಲಾಖೆ, ತಾಲೂಕು ಪಂಚಾಯತಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ 75ನೇ ವರ್ಷದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಾಗೂ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾ ಧಿಕಾರದ 25ನೇ ವರ್ಷಾರಂಭದ ಪ್ರಯುಕ್ತ ಆಯೋಜಿಸಿದ್ದ ಕಾನೂನುಸಾಕ್ಷರತಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕಾಯ್ದೆ-ಕಾನೂನುಗಳನ್ನು ತಿಳಿದುಕೊಂಡು ಇತರರಿಗೂ ತಿಳಿವಳಿಕೆ ನೀಡಬೇಕು. ಕಾನೂನಿನಲ್ಲಿ ಎಲ್ಲ ಸಮಸ್ಯೆಗಳಿಗೂ ಪರಿಹಾರವಿದೆ ಎಂದರು. ಅಧ್ಯಕ್ಷತೆ ವಹಿಸಿದ್ದ ಗ್ರಾಮ ಪಂಚಾಯತಿ ಅಧ್ಯಕ್ಷೆ ಸಂಗೀತಾ ತೆರೆದಳ್ಳಿ ಮಾತನಾಡಿ, ದೌರ್ಜನ್ಯಕ್ಕೆ ಒಳಗಾಗದ ಮಹಿಳೆಯರು ಧೈರ್ಯವಾಗಿ ಕಾನೂನಿನ ನೆರವು ಪಡೆದುಕೊಳ್ಳುವ ಮೂಲಕ ಇಂತಹ ಕಾರ್ಯಕ್ರಮಗಳ ಸದುಪಯೋಗ ಮಾಡಿಕೊಳ್ಳಬೇಕು ಎಂದು ಹೇಳಿದರು. ಡಿವೈಎಸ್‌ಪಿ ಶಂಕರ ಮಾರಿಹಾಳ ಮಾತನಾಡಿ, ಇಂದು ಸೈಬರ್ ಕ್ರೈಂ ಅಪರಾಧಗಳು ಹೆಚ್ಚಾಗಿದ್ದು, ಆಧುನಿಕ ಯುಗದಲ್ಲಿ ಅತ್ಯಂತ ಜಾಗೃತರಾಗಿ ಯಾವುದೇ ಆಸೆ-ಆಮಿಷಗಳಿಗೆ ಒಳಗಾಗದೇ ಕಾನೂನಿನ ಚೌಕಟ್ಟಿನೊಳಗೆ ವ್ಯವಹರಿಸಬೇಕು ಎಂದರು.
Related Articles
Advertisement
ಲೋಕ್ ಅದಾಲತ್‌ನಲ್ಲಿ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಹಾಗೂ ವ್ಯಾಜ್ಯಪೂರ್ವ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ 60 ದಿನದೊಳಗಾಗಿ ಬಗೆಹರಿಸಲಾಗುವುದು ಹಾಗೂ ಉಭಯ ಪಕ್ಷಗಾರರ ಹಿತ ಕಾಪಾಡಲಾಗುವುದು. ಇದೊಂದು ಸುವರ್ಣಾವಕಾಶವಾಗಿದ್ದು, ಎಲ್ಲರೂ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಹಿರಿಯ ನ್ಯಾಯಾಧೀಶರು ಹಾಗೂ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪುಟ್ಟರಾಜು ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ನ್ಯಾಯವಾದಿಗಳ ಸಂಘದ ಕಾರ್ಯದರ್ಶಿ ಎಸ್.ಐ.ನಂದಿ, ಪಿಡಿಒ ರುಬೀನ ದೊಡ್ಡಮನಿ ಇತರರು ಇದ್ದರು.
ಕಾನೂನು ಎಂದರೆ ಒಳ್ಳೆಯದನ್ನು ಗೌರವಿಸುವುದು ಹಾಗೂ ಕೆಟ್ಟದ್ದನ್ನು ಖಂಡಿಸುವುದಾಗಿದೆ. ಯಾವುದೇ ಅನ್ಯಾಯವಾದಲ್ಲಿ ಕಾನೂನು ಸೇವೆಗಳ ಪ್ರಾ ಧಿಕಾರದಿಂದ ನೆರವು ಪಡೆಯಬಹುದಾಗಿದೆ. ಕಾನೂನು ನೆರವು ಹಾಗೂ ಸಹಾಯ ಒದಗಿಸಲಾಗುವುದು.ಯಾದವ ವನಮಾಲಾ
ಆನಂದರಾವ್, ಪ್ರಧಾನ ಜಿಲ್ಲಾ ಮತ್ತು
ಸತ್ರ ನ್ಯಾಯಧೀಶರು