Advertisement
ಜಿಲ್ಲಾಡಳಿತ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ರಾಯಚೂರು, ಹೈಕ ಪ್ರದೇಶಾಭಿವೃದ್ಧಿ ಮಂಡಳಿ ಕಲಬುರಗಿ ಸಹಯೋಗದಲ್ಲಿ ಗುರುವಾರ ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಆವರಣದಲ್ಲಿ ಆಯೋಜಿಸಿದ್ದ ತಾಲೂಕಿನ ವಿವಿಧ ಗ್ರಾಮಗಳಲ್ಲಿ ನಿರ್ಮಿಸಿದ ಶಾಲಾ ಕಟ್ಟಡಗಳ ಉದ್ಘಾಟನೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಯೋಜನೆ ಮೂಲಕ ಶಿಕ್ಷಕರಿಗೆ ತರಬೇತಿ ನೀಡಲು ವ್ಯವಸ್ಥೆ ಮಾಡಲಾಗಿದೆ. ಶಾಲಾ ಕಟ್ಟಡಗಳ ದುರಸ್ತಿ, ನಿರ್ಮಾಣ, ಕುಡಿಯುವ ನೀರು, ಮೂಲ ಸೌಕರ್ಯ ಕಲ್ಪಿಸಲು ಈಗಾಗಲೇ ಕ್ರಿಯಾಯೋಜನೆ ರೂಪಿಸಿ ಮಂಜೂರಾತಿ ನೀಡಲಾಗಿದೆ ಎಂದು ಹೇಳಿದರು. ಶಿಕ್ಷಕರು ಮಕ್ಕಳನ್ನು ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ಪ್ರಾಮಾಣಿಕ ಸೇವೆ ಸಲ್ಲಿಸಬೇಕು. ಮಕ್ಕಳ ಭವಿಷ್ಯ ರೂಪಿಸಬೇಕಾದ ಶಿಕ್ಷಕರು ಕರ್ತವ್ಯಲೋಪ ಎಸಗಿ ಕಠಿಣ ಕ್ರಮಕ್ಕೆ ಗುರಿಯಾಗಬೇಡಿ ಎಂದು ಕಿವಿಮಾತು ಹೇಳಿದರು.
Related Articles
Advertisement
ಸಂಸದ ಬಿ.ವಿ. ನಾಯಕ ಮಾತನಾಡಿ, ವಸತಿ ಸಹಿತ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಅರಕೇರಾ ಗ್ರಾಮದಲ್ಲಿ ಪ್ರಥಮ ದರ್ಜೆ ಕಾಲೇಜು ಸ್ಥಾಪಿಸಲು ಸರಕಾರಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ. ಹಾಸನ ಮಾದರಿಯಲ್ಲಿ ಅಭಿವೃದ್ಧಿಗೆ ಚಿಂತನೆ ಮಾಡಲಾಗಿದೆ ಎಂದರು.
ಶಾಸಕ ಕೆ. ಶಿವನಗೌಡ ನಾಯಕ ಮಾತನಾಡಿ, ಈ ಭಾಗದ ಅಭಿವೃದ್ಧಿಗೆ ಉಸ್ತುವಾರಿ ಸಚಿವರು ಗಮನಹರಿಸಬೇಕು. ಆಗಾಗ ತಾಲೂಕಿಗೆ ಭೇಟಿ ನೀಡಿ ಸಮಸ್ಯೆ ಬಗೆಹರಿಸಬೇಕು. ಕೃಷ್ಣಾ ಬಲದಂಡೆ ನಾಲೆ ರೈತರ ಬೆಳೆಗಳಿಗೆ 15 ದಿನದವರೆಗೆ ನೀರು ಹರಿಸಲು ಸರಕಾರ ಮಟ್ಟದಲ್ಲಿ ಒತ್ತಡ ಹೇರಿ ನೀರು ಬಿಡುವ ಕೆಲಸ ಮಾಡಬೇಕು ಎಂದು ವಿನಂತಿಸಿದರು.
ವಿಧಾನ ಪರಿಷತ್ ಸದಸ್ಯ ಬಸವರಾಜ ಪಾಟೀಲ್ ಇಟಗಿ, ತಾಪಂ ಅಧ್ಯಕ್ಷ ಹನುಮಂತ ಕಟ್ಟಮನಿ, ಜಿಪಂ ಸದಸ್ಯ ವೆಂಕಟೇಶ ಪೂಜಾರಿ, ಎಪಿಎಂಸಿ ಜಿಲ್ಲಾಧ್ಯಕ್ಷ ಅಮರೇಗೌಡ ಹಂಚಿನಾಳ, ಅಪರ ಜಿಲ್ಲಾಧಿ ಕಾರಿ ಗೋವಿಂದರೆಡ್ಡಿ, ಜಿಲ್ಲಾಉಪನಿರ್ದೇಶಕ ಬಷೀರ್ ಅಹ್ಮದ ನಂದನೂರು, ಬಿಇಒ ಎಸ್.ಎಂ.ಹತ್ತಿ, ನಾಗರಾಜ ಅರಳಿಮರ, ಶಿಕ್ಷಣ ಸಂಯೋಜಕ ಚಿದಾನಂದಪ್ಪ ಶಿವಂಗಿ, ಬಸವರಾಜ ಮಸರಕಲ್, ವಿಶ್ವನಾಥ ಪಾಟೀಲ್, ವೆಂಕಟೇಶ ಗಲಗ, ಸುರೇಶ, ರತ್ನಾಕರ, ಮುಕ್ತಿಪ್ರಸಾದ ಇತರರು ಇದ್ದರು.