Advertisement

ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಕೇಸ್ : ಪೋಲೀಸರ ಅಮಾನತು

06:31 PM Oct 22, 2021 | Team Udayavani |

ಮಂಗಳೂರು : ಕಾನೂನು ವಿದ್ಯಾರ್ಥಿನಿಗೆ ನ್ಯಾಯವಾದಿ ಕೆ ಎಸ್ ಎನ್ ರಾಜೇಶ್ ಲೈಂಗಿಕ ಕಿರುಕುಳ ನೀಡಿದ್ದಾರೆನ್ನಲಾದ ಪ್ರಕರಣಕ್ಕೆ ಸಂಬಂಧಿಸಿ ಕರ್ತವ್ಯ ಲೋಪವೆಸಗಿದ ಆರೋಪದಲ್ಲಿ ಉರ್ವ ಪೊಲೀಸ್ ಠಾಣೆಯ ಪಿ ಎಸ್ಐ ಶ್ರೀಕಲಾ ಮತ್ತು ಹೆಡ್ ಕಾನ್ ಸ್ಟೆಬಲ್ ಪ್ರಮೋದ್ ಎಂಬವರನ್ನು ಪೊಲೀಸ್ ಅಯುಕ್ತ ಎನ್. ಶಶಿಕುಮಾರ್ ಶುಕ್ರವಾರ ಅಮಾನತುಗೊಳಿಸಿದ್ದಾರೆ.

Advertisement

ಮಂಗಳೂರಿನ ಲೋಕಾಯುಕ್ತ ವಿಭಾಗದ ವಿಶೇಷ ಸರಕಾರಿ ಅಭಿಯೋಜಕ ಕೆ.ಎಸ್.ಎನ್ ರಾಜೇಶ್ ಅವರು ಕಾನೂನು ವಿದ್ಯಾರ್ಥಿನಿಯೊಬ್ಬರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ ಎಂದು ಆರೋಪಿಸಿ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿದ್ಯಾರ್ಥಿನಿ ಕಳೆದ ಆ.8 ರಂದು ಕೆ.ಎಸ್.ಎನ್ ರಾಜೇಶ್ ಅವರ ಕರಂಗಲ್ಪಾಡಿಯ ಕಚೇರಿಯಲ್ಲಿ ತರಬೇತಿಗಾಗಿ ಸೇರಿದ್ದರು. ಆಗ ರಾಜೇಶ್ ಯುವತಿಯನ್ನು ಪುಸಲಾಯಿಸಿ ಲೈಂಗಿಕವಾಗಿ ಬಳಸಿಕೊಳ್ಳಲು ಒತ್ತಾಯಿಸುತ್ತಿದ್ದರು. ಸೆ.25 ರಂದು ಚೇಂಬರ್ ಒಳಗೆ ಕರೆದು ಅಸಭ್ಯವಾಗಿ ವರ್ತಿಸಿ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ರಾಜೇಶ್ ಲೋಕಾಯುಕ್ತದಲ್ಲಿ ದಾಖಲಾಗುವ ಭ್ರಷ್ಟಾಚಾರ ಪ್ರಕರಣಗಳಲ್ಲಿ ವಿಶೇಷ ಸರಕಾರಿ ಅಭಿಯೋಜಕರಾಗಿ ಕಳೆದ ಕೆಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರು.

ಎರಡು ದಿನಗಳ ಹಿಂದೆ ರಾಜೇಶ್ ಮತ್ತು ವಿದ್ಯಾರ್ಥಿನಿ ಮಾತನಾಡಿದ್ದು ಎನ್ನಲಾದ ಫೋನ್ ಕರೆಯ ಆಡಿಯೋ ಹರಿದಾಡಿತ್ತು. ಆರೋಪಗಳನ್ನು ರಾಜೇಶ್ ನಿರಾಕರಿಸಿದ್ದಾರೆ.

Advertisement

ರಾಜೇಶ್‌ ವಿರುದ್ಧ ಮತ್ತೋರ್ವಳು ಕಾನೂನು ವಿದ್ಯಾರ್ಥಿನಿ ದೂರು ನೀಡಿದ್ದು, ಅದರಂತೆ ಪ್ರಕರಣ ದಾಖಲಾಗಿದೆ. ಮಹಿಳೆಯೋರ್ವರು ಕರೆ ಮಾಡಿ “ಆಡಿಯೋ ವೈರಲ್‌ ಮಾಡಿದ್ದು ನೀನೇ. ನಿನಗೆ ರಕ್ಷಣೆ ನೀಡುತ್ತೇನೆ’ ಎಂದು ಹೇಳಿದರು. ಅನಂತರ ಮನೆಗೆಬಂದು ಬಲವಂತವಾಗಿ ನನ್ನನ್ನು ಮತ್ತು ಸಹೋದರಿಯನ್ನು ಕಾರಿನಲ್ಲಿ ಹತ್ತಿಸಿಕೊಂಡು ಉರ್ವ ಠಾಣೆಗೆ ಕರೆದೊಯ್ದು ಅಲ್ಲಿ ರಾಜೇಶ್‌ ಮತ್ತು ಇತರ ಕೆಲವರು ಬಲವಂತವಾಗಿ ಕ್ಷಮಾಪಣೆ ಪತ್ರ ಬರೆಯಿಸಿಕೊಂಡಿದ್ದಾರೆ ಎಂದು ದೂರಿನಲ್ಲಿ ವಿದ್ಯಾರ್ಥಿನಿ ತಿಳಿಸಿದ್ದಳು.

ಎನ್‌. ಶಶಿಕುಮಾರ್‌ ಅವರು ಮಂಗಳವಾರ ರಾಜೇಶ್‌ ಕಚೇರಿಗೆ ತೆರಳಿ ಪರಿಶೀಲನೆ ನಡೆಸಿದ್ದರು. ಈ ಪ್ರಕರಣ ಗಂಭೀರವಾಗಿದ್ದು, ತನಿಖೆಗೆ ಎಸಿಪಿಯವರನ್ನು ನೇಮಿಸಲಾಗಿದೆ. ಆರೋಪಿಯನ್ನು ವಶಕ್ಕೆ ಪಡೆಯಲಾಗುವುದು ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next