ವಿಜಯಪುರ: ಸ್ವಿಗ್ಗಿ, ಅಮೆಜಾನ್, ಫ್ಲಿಪ್ ಕಾರ್ಟ್ ಸೇರಿದಂತೆ ಇ-ಕಾಮರ್ಸ್, ಆನ್ ಲೈನ್ ವ್ಯವಸ್ಥೆಯಲ್ಲಿ ದುಡಿಯುತ್ತಿರುವ ಕಾರ್ಮಿಕರ ಸೇವಾ ಭದ್ರತೆ ಹಾಗೂ ಸಂಕಷ್ಟ ನೆರವಿಗೆ ಧಾವಿಸಲು ನಮ್ಮ ಸರ್ಕಾರ ಕಾನೂನು ರೂಪಿಸಲು ಮುಂದಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಹೇಳಿದರು.
ಮಂಗಳವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇ ಉದ್ಯಮದಲ್ಲಿ ಕೆಲಸ ಮಾಡುವ ಸುಮಾರು 3 ಲಕ್ಷ ಕಾರ್ಮಿಕರಿಗೆ ಇದರಿಂದ ಅನುಕೂಲವಾಗಲಿದೆ ಎಂದರು.
ಇದನ್ನೂ ಓದಿ:Maharashtra: ಸರಕಾರಿ ಆಸ್ಪತ್ರೆಯಲ್ಲಿ ಮತ್ತೆ ಏಳು ರೋಗಿಗಳು ಮೃತ, 48 ಗಂಟೆಯಲ್ಲಿ 31 ಸಾವು
ಇದರಿಂದ ಅಪಘಾತ, ವಿಮಾ ಸೌಲಭ್ಯ, ಆರೋಗ್ಯ, ಕಲ್ಯಾಣ ಕಾರ್ಯಕ್ರಮ ಕೈಗೊಳ್ಳಲು ಕಾನೂನು ಜಾರಿಗೆ ಮುಂದಾಗಲಿದ್ದೇವೆ. ಇದರಿಂದ ಆನ್ ಲೈನ್ ಉದ್ಯಮದಲ್ಲಿ ದುಡಿಯುವ ಕಾರ್ಮಿಕರ ಹಿತ ರಕ್ಷಣೆಗೆ ಈ ಕಾನೂನು ಸಹಕಾರಿ ಆಗಲಿದೆ ಎಂದರು.
ಚುನಾವಣೆ ಸಂದರ್ಭದಲ್ಲಿ ಮಾತ್ರ ಪಕ್ಷದ ಸಂಘಟನೆಯಲ್ಲ. ಪಕ್ಷದ ವರಿಷ್ಠ ನಾಯಕ ರಾಹುಲ್ ಗಾಂಧಿ ಅವರ ಭಾರತ ಜೋಡೋ ಯಾತ್ರೆಯಿಂದಲೇ ದೇಶದಲ್ಲಿ ಕಾಂಗ್ರೆಸ್ ಲೋಕಸಭೆ ಚುನಾವಣೆ ಸಿದ್ಧತೆ ನಡೆಸಿದೆ ಎಂದರು.